ಇಂಡಿ : ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇರೂಗಿ ಗ್ರಾಮ ಪಂಚಾಯತ್ ಚುನಾವಣೆಯ ಕಾವು ಬಿಸಿಲಿನಂತೆ ಏರಿಕೆ ಆಗುತ್ತಿದೆ. ಇಂದು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಗ್ರಾಮ ಪಂಚಾಯತ್ ಸದಸ್ಯರು ನಾಮಪತ್ರಗಳು ಸಲ್ಲಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ರಾಜಕುಮಾರ ಡಂಗಿ ಮತ್ತು ಅಂಬವ್ವ ಚನ್ನಪ ಕೊಟಗೊಂಡ ನಾಮಪತ್ರ ಸಲ್ಲಿಸಿದ್ದರೆ, ಉಪಾಧ್ಯಕ್ಷ ಸ್ಥಾನಕ್ಕೆ ಮುಕ್ತಬಾಯಿ ಸಮಗಾರ ಮತ್ತು ಯಶವಂತ ಹೊಸಮನಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನೂ ಮಧ್ಯಾಹ್ನದ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಫಲಿತಾಂಶ ಹೊರಬರಲಿದೆ.