ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ (83) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಿದ್ದಾರೆ. ಇಂದು ಬೆಳಿಗ್ಗೆ 6:30 ರ ವೇಳೆಗೆ ಚಂಪಾ ನಿಧನರಾಗಿದ್ದಾರೆ. ಪತ್ನಿ,ಇಬ್ಬರು ಮಕ್ಕಳನ್ನು ಅಗಲಿ ಬಾರದ ಲೋಕಕ್ಕೆ ತೆರಳಿದ್ದಾರೆ.
ಇನ್ನು ಚಂಪಾ ಅವರು ಕನ್ನಡ ನಾಡು-ನುಡಿ ಸಂಸ್ಕೃತಿ ರಕ್ಷಣೆಗೆ ಹೋರಾಟ ಮಾಡಿದ್ದರು. ಚಂಪಾ ರವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, ಕರ್ನಾಟಕ ಅಕಾಡೆಮಿ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಬಸವ ಶ್ರೀ ಪ್ರಶಸ್ತಿ, ಅಲ್ದೆ 2017 ರಲ್ಲಿ ಮೈಸೂರಿನಲ್ಲಿ ನಡೆದಿದ್ದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಚಂಪಾ ರವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.