ಇಂಡಿಯಲ್ಲಿ ಜ-3 ರಂದು ಶಾಲೆಗಳಿಗೆ ರಜೆ ಕಾರಣ ಗೊತ್ತಾ..!
ಜ- 3 ರಂದು ಶಾಲೆಗಳಿಗೆ ರಜೆ ಅಥರ್ಗಾ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಗಳ ಗುರುನಮನ ಕಾರ್ಯಕ್ರಮ
ಇಂಡಿ : ಶ್ರೀ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳ ಗುರುನಮನ ಕಾರ್ಯಕ್ರಮವು ತಾಲ್ಲೂಕಿನ ಅಥರ್ಗಾ ಗ್ರಾಮದಲ್ಲಿ ಜನವರಿ 3 ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳು ಪಾಲ್ಗೊಳ್ಳವ ಸಲುವಾಗಿ ರಜೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಟಿ ಎಸ್ ಆಲಗೂರ ತಿಳಿಸಿದ್ದಾರೆ.
ಯಶವಂತರಾಯಗೌಡ ಪಾಟೀಲ, ಶಾಸಕರು ಇಂಡಿ ವಿಧಾನಸಭಾ ಮತಕ್ಷೇತ್ರ ರವರು ಇಂಡಿ ತಾಲ್ಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಳು ಸದರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೂಚಿಸಿರುವುದರಿಂದ ಸದರಿ ದಿನದಂದು ಈ ತಾಲ್ಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ, ಸದರಿ ರಜೆ ದಿನವನ್ನು ಮುಂದಿನ ಭಾನುವಾರದಂದು ಸರಿದೂಗಿಸಲು ತೀರ್ಮಾನಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.