ಇಂಡಿ : ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು ಹಾನಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬುಯ್ಯಾಂರ್ ಗ್ರಾಮದಲ್ಲಿ ಗುರುವಾರ ನಡೆದಿದೆ. ಪುತಳಿಬಾಯಿ ಗಡ್ಡೆಪ್ಪ ತಳಕೇರಿ ಎಂಬುವರಿಗೆ ಸೇರಿದ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಲ್ಲದೇ, ಮನೆಯಲ್ಲಿದ್ದ 50 ಸಾವಿರ ನಗದು, 3ತೊಲಿ ಚಿನ್ನ, ದವಸ ಧಾನ್ಯಗಳು ಸೇರಿದಂತೆ ವಿವಿಧ ವಸ್ತುಗಳು ಬೆಂಕಿಗಾಹುತಿ ಆಗಿದೆ. ಸ್ಥಳಕ್ಕೆ ಜೆಡಿಎಸ್ ಮುಖಂಡ ಬಿಡಿ ಪಾಟೀಲ ಭೇಟಿ ನೀಡಿದರು. ಅಲ್ಲದೇ, ತಳಕೇರಿ ಅವರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.