ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಆಯೋಜನೆ
ಸ್ವಪ್ರೇರಣೆಯಿಂದ ಮಾನವ ಸರಪಳಿಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕರೆ
ವಿಜಯಪುರ, ಸೆಪ್ಟೆಂಬರ್ 06 : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಜಿಲ್ಲೆಯಲ್ಲಿ ಸೆ.15ರಂದು ಆಯೋಜಿಸುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿವಿಧ ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು, ಸರ್ಕಾರಿ-ಅರೆ ಸರ್ಕಾರಿ ನೌಕರರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ.
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ದೇಶದ ನಾಗರಿಕರಿಗೆ ಅರಿವು ಮೂಡಿಸುವುದು ಮುಖ್ಯ ಉದ್ದೇಶವಾಗಿದೆ. ಈ ದಿಸೆಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು 2024-25ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ದಿ ಮತ್ತು ನಗರ ಯೋಜನಾ ಇಲಾಖೆ, ಪೌರಾಡಳಿತ ಮತ್ತು ಹಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಬೀದರಿನಿಂದ ಚಾಮರಾಜ್‍ನಗರದವರೆಗೆ 2800 ಕಿ.ಮೀ. ಮಾನವ ಸರಪಳಿ ಆಯೋಜಿಸುವ ಮೂಲಕ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರ ತೀರ್ಮಾನಿಸಿದೆ.
ನೋಡಲ್ ಅಧಿಕಾರಿಗಳು : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ಹಮ್ಮಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಕಾರ್ಯಕ್ರಮದ ಸಂಪೂರ್ಣ ಮೇಲುಸ್ತುವಾರಿ ವಹಿಸಲಾಗಿದೆ.
ಮುದ್ದೇಬಿಹಾಳ ತಾಲೂಕಿನ ವಿರೇಶ ನಗರ ಹಾಗೂ ನಾಲತ್ತವಾಡಕ್ಕೆ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ (ಮೊ:9599909724), ನಾಗರಬೆಟ್ಟ ಹಾಗೂ ಹಿರೇಮುರಾಳ ಗ್ರಾಮಕ್ಕೆ ಆಹಾರ ಮತ್ತು ನಾಗರೀಕರ ಸರಬರಾಜು ಮತ್ತು ಗ್ರಾಹ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ (ಮೊ: 8951420399) ಇವರನ್ನು ನೊಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಕವಡಿಮಟ್ಟಿ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಮುದ್ದೇಬಿಹಾಳಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಣ್ಣ ಆಶಾಪೂರ (ಮೊ: 9731042063), ಗೆದ್ದಲಮರಿ ಹಾಗೂ ಚಲಮಿ ಗ್ರಾಮಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ (ಮೊ:9448342754), ಜಟಗಿ ಎಲ್.ಟಿ.ನಂ.-01 ಹಾಗೂ ಎಲ್.ಟಿ.ನಂ.-02 ಮತ್ತು ಹುಲ್ಲೂರ ಎಲ್.ಟಿ. ಗ್ರಾಮಗಳಿಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀಮತಿ ರೂಪಾ ಎಲ್. (ಮೊ:8277930601) ಇವರನ್ನು ನೇಮಕ ಮಾಡಲಾಗಿದೆ.
ಹುಲ್ಲೂರ ಗ್ರಾಮಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೆಶಕ ಎಲ್.ಎಸ್.ನಾಗೂರ (ಮೊ: 9448999331), ನಿಡಗುಂದಿ ಗ್ರಾಮಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ (ಮೊ: 9844849238), ಆಲಮಟ್ಟಿ ಹಾಗೂ ಬಾಗಲಕೋಟೆ ಜಿಲ್ಲೆ ಗಡಿಗೆ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಮತಿ ವನೀತಾ ಆರ್. (ಮೊ: 9535366392) ಇವರನ್ನು ನೇಮಕ ಮಾಡಲಾಗಿದೆ.
ಸೆ.15 ರಂದು ಬೆಳಿಗ್ಗೆ 8-30ರಿಂದ 9-30ರವರೆಗೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಪ್ರಾರಂಭಿಸಿ, ನಾಲತವಾಡ, ನಾಗರಬೆಟ್ಟ, ಹಿರೇಮುರಾಳ, ಕವಡಿಮಟ್ಟಿ, ಮುದ್ದೇಬಿಹಾಳ, ಗೆದ್ದಲಮರಿ, ಚಲಮಿ, ಜಟ್ಟಿಗಿ ತಾಂಡಾ ನಂ.-1, ಹಾಗೂ ತಾಂಡಾ ನಂ.2, ಹುಲ್ಲೂರ ತಾಂಡಾ, ಹುಲ್ಲೂರ, ನಿಡಗುಂದಿ ಹಾಗೂ ಆಲಮಟ್ಟಿಯಿಂದ ಬಾಗಲಕೋಟೆ ಜಿಲ್ಲೆಯ ಗಡಿ ಪ್ರವೇಶವರೆಗೆ ಈ ರೀತಿ ಸುಮಾರು 60 ಕಿ.ಮೀ. ವರೆಗೆ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಕಾಲೇಜ್, ಶಾಲೆಗಳಿಂದ ವಸತಿ ನಿಲಯದ ಮಕ್ಕಳು, ಮಹಿಳಾ ಸ್ವ-ಸಹಾಯ ಗುಂಪುಗಳು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು, ಎಲ್ಲ ಸಮುದಾಯದ ಮುಖಂಡರು, ವಿವಿಧ ಕ್ರೀಡೆ ಮತ್ತು ಸಾಂಸ್ಕøತಿಕ ಸಂಘಗಳ ಸದಸ್ಯರು, ಪದಾಧಿಕಾರಿಗಳು, ವಿವಿಧ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ನೌಕರ ಸಂಘಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.