ರಾಯಚೂರು:ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ,ರಾಯಚೂರು ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ನಗರದ ಸಮೀಪದ ಹುಣಿಸಿಹಾಳ ಹುಡಾ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಂದಿನ ದಿನಗಳಲ್ಲಿ ಪವರ್ ಗ್ರಿಡ್ ವತಿಯಿಂದ ಇಂತಹ ಅನೇಕ ಸೇವೆಗಳನ್ನು ನೀಡಲಾಗುತ್ತದೆ ಎಂದು ಪವರ್ ಗ್ರಿಡ್ ನ ಮುಖ್ಯಸ್ಥರು ತಿಳಿಸಿದರು.