ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವು..!
ವಿಜಯಪುರ : ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮಂಗಳವಾರ ಸಂಜೆ ಅಪಘಾತವಾಗಿದೆ. ಬೀಳಗಿ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 2012 ಬ್ಯಾಚಿನ ಅಧಿಕಾರಿಯಾಗಿದ್ದ ಬೀಳಗಿ ಅವರು ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಸಂಬಂಧಿಕರ ಮದುವೆಗೆ ತೆರಳುತ್ತಿದ್ದ ವೇಳೆ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ ಎಂದು ವರದಿಯಾಗಿದೆ. ಜೇವರ್ಗಿಯ ಗೌನಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ.


















