ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ನಾಯಕರ ಜೊತೆ ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಆಕ್ರೋಶ ಹೊರ ಹಾಕಿದ್ದಾರೆ. ಸಿದ್ದು ಮತ್ತು ಡಿಕೆಶಿ ತಲೆಯಲ್ಲಿ ಹುಳು ಬಿಡುವ ಕೆಲಸ ಮಾಡಿದ್ದಾರೆ. ಸಿಎಂ ಕುರ್ಚಿಗಾಗಿ ಸಿದ್ದು, ಡಿಕೆಶಿ ಬಡಿದಾಡಿಕೊಳ್ಳುತ್ತಿದ್ದಾರೆ. ಅಲ್ದೆ ಇಬ್ಬರು ನಾಯಕರು ಸಿಎಂ ಆಗುವ ಭ್ರಮೆಯಲ್ಲಿದ್ದಾರೆ. ಇನ್ನು ಇಂತಹ ಸ್ಥಿತಿಯಲ್ಲಿ ಕಾಂಗ್ರೆಸ್ಗೆ ಹೋಗುವದಕ್ಕೆ ಯಾರೂ ತಯಾರಿಲ್ಲ. ಚುನಾವಣೆ ಸಮೀಸುತ್ತಿದ್ದಂತೆ ಕಾಂಗ್ರೆಸ್ನವರು ಗಿಮಿಕ್ ಶುರು ಮಾಡುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿದರು.