ICC Champions Trophy 2025: voiceofjanata.in
ಇಂದು ಭಾರತ Vs ನ್ಯೂಜಿಲೆಂಡ್ ಹೈವೋಲ್ಟೇಜ್ ಪಂದ್ಯ ಯಾರಾಗುತ್ತಾರೆ ಐಸಿಸಿ ಚಾಂಪಿಯನ್
Voiceofjanata Sports News: ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ನಲ್ಲಿಂದು ಭಾರತ ಪಡೆ ನ್ಯೂಜಿಲೆಂಡ್ ತಂಡವನ್ನ ಇಂದು ಎದುರಿಸಲಿದೆ. 25 ವರ್ಷಗಳ ಬಳಿಕ ಎರಡು ತಂಡಗಳು ಫೈನಲ್ನಲ್ಲಿ ಮುಖಾಮುಖಿಯಾಗುತ್ತಿದ್ದು, ವಿಶ್ವ ಕ್ರಿಕೆಟ್ ಚಾಂಪಿಯನ್ಶಿಪ್ಗಾಗಿ ಎರಡು ತಂಡಗಳು ಸೆಣಸಾಡಲಿವೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಅಂತಿಮ ಪಂದ್ಯ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಉಭಯ ದೇಶಗಳ ನಡುವಿನ ಈ ಮಹಾನ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದೆ.
ಸಂಭಾವ್ಯ ಪ್ಲೇಯಿಂಗ್-11
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್.
ನ್ಯೂಜಿಲೆಂಡ್: ರಚಿನ್ ರವೀಂದ್ರ, ವಿಲ್ ಯಂಗ್, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಮ್ಯಾಟ್ ಹೆನ್ರಿ, ವಿಲಿಯಂ ಒ’ರೂರ್ಕ್.