ICC ODI Men’s CricKet World Cup 2023:IND VS AUS
Voice Of Janata DesK NEWS : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ (ನವೆಂಬರ್ 19) 2023ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ನಡೆಯಲಿದೆ. ಪ್ರಶಸ್ತಿ ಮುಡಿಗೇರಿಸಿಕೊಳ್ಳಲು 5 ಬಾರಿ ಚಾಂಪಿಯನ್ಸ್ ಆಸ್ಟ್ರೇಲಿಯಾ ಹಾಗೂ ಭಾರತದ ನಡುವೆ ಫೈನಲ್ ಫೈಟ್ ನಡೆಯಲಿದೆ.
ಭಾನುವಾರ ನಡೆಯಲಿರುವ ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಗಂಟೆಗಳಲ್ಲಿ ಈ ಎರಡು ಬಲಿಷ್ಠ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಕಾದಾಟ ನಡೆಸಲಿದೆ. ಈ ಪಂದ್ಯವನ್ನು ಸುಮಾರು ಒಂದು ಲಕ್ಷ ಮೂವತ್ತು ಸಾವಿರ ಜನರು ನೇರವಾಗಿ ವೀಕ್ಷಿಸಿದರೆ ಕೋಟ್ಯಂತರ ಜನರು ಟಿವಿ ಹಾಗೂ ಒಟಿಟಿ ವೇದಿಕೆಗಳ ಮೂಲಕ ವಿಶ್ವಾದ್ಯಂತ ವೀಕ್ಷಿಸಲಿದ್ದಾರೆ.
ಎರಡು ತಂಡದ ಆಡುವ ಆಟಗಾರರು
ಟೀಮ್ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ಪ್ರಸೀದ್ ಕೃಷ್ಣ
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್, ಶಾನ್ ಅಬಾಟ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್
ಪಂದ್ಯ ಪ್ರಾರಂಭದವಾಗುವ ಸಮಯ
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ವಿರುದ್ಧದ ಈ ವಿಶ್ವಕಪ್‌ನ ಅಂತಿಮ ಪಂದ್ಯ ಭಾನುವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ಆರಂಭಕ್ಕೂ ಮುನ್ನ ಅದ್ದೂರಿ ಸಮಾರೋಪ ಸಮಾರಂಭ ಆಯೋಜನೆಯಾಗಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.