Voice Of Janata DesK News : ICC ODI Men’s World Cricket CUP 2023: Pakistan VS INGALAND
ಕೋಲ್ಕತ್ತ: ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಲೀಗ್ ಹಂತದಲ್ಲಿ ಈ ಎರಡು ತಂಡಗಳಿಗೂ ಕೊನೆಯ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪಾಕಿಸ್ತಾನ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 337 ರನ್‌ಗಳ ಬೃಹತ್ ಮೊತ್ತ ದಾಖಲಿಸಿದೆ.
ಇಂಗ್ಲೆಂಡ್ ತಂಡವು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಇಂಗ್ಲೆಂಡ್ 337 ರನ್‌ಗಳನ್ನು ಪೇರಿಸಿತು. ಬೆಸ್ಟೊ 59, ರೂಟ್ 60 ಸ್ಟ್ರೋಕ್ಸ್ 84 ರನ್‌ಗಳ ನೆರವಿನಿಂದಾಗಿ ಇಂಗ್ಲೆಂಡ್ 300 ರನ್‌ಗಳ ಗಡಿ ದಾಟಲು ಸಾಧ್ಯವಾಯಿತು.
ಈಗಾಗಲೇ ಸೆಮಿಫೈನಲ್ ರೇಸ್‌ನಿಂದ ಹೊರ ಬಿದ್ದಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಕ್ಕೆ ಇದು ಔಪಚಾರಿಕ ಪಂದ್ಯ
ಇಂಗ್ಲೆಂಡ್ ತಂಡ
ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಗುಸ್ ಅಟ್ಕಿನ್ಸನ್, ಆದಿಲ್ ರಶೀದ ಬೆಂಚ್: ಮಾರ್ಕ್ ವುಡ್, ಲಿಯಾಮ್ ಲಿವಿಂಗ್ಸ್ಟೋನ್, ಸ್ಯಾಮ್ ಕರ್ರಾನ್, ಬ್ರೈಡನ್ ಕಾರ್ಸೆ
ಪಾಕಿಸ್ತಾನ ತಂಡ
ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಮ್ ಜೂನಿಯರ್, ಹ್ಯಾರಿಸ್ ರೌಫ್
ಬೆಂಚ್: ಹಸನ್ ಅಲಿ, ಉಸಾಮಾ ಮಿರ್, ಮೊಹಮ್ಮದ್ ನವಾಜ್,