ICC ODI WORLD CUP 2023 : ಇಂದು ಭಾರತದ ವಿರುದ್ಧ ಯಾರು ಆಡುತ್ತಾರೆ ಗೊತ್ತಾ..!
Voice Of Janata News Desk :
ಐಸಿಸಿ ವಿಶ್ವಕಪ್ 2023 : ಭಾರತ ಅತಿಥ್ಯದಲ್ಲಿ ನಡೆಯುತ್ತಿರುವ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಬುಧವಾರ ಎರಡನೇ ಪಂದ್ಯವನ್ನಾಡಲಿದ್ದು ಈ ಪಂದ್ಯದಲ್ಲಿ ಭಾರತಕ್ಕೆ ಅಫ್ಘಾನಿಸ್ತಾನ ತಂಡ ಎದುರಾಳಿಯಾಗಿ ಕಣಕ್ಕಿಳಿಯಲಿದೆ. ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಅದ್ಭುತ ಗೆಲುವು ಸಾಧಿಸಿದ್ದು ಎರಡನೇ ಪಂದ್ಯದಲ್ಲಿ ಅದೇ ಗೆಲುವಿನ ಲಯವನ್ನು ಮುಂದುವರಿಸುವ ವಿಶ್ವಾಸದಲ್ಲಿದೆ.
ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಇನ್ನು ಟೀಮ್ ಇಂಡಿಯಾ ಹಾಗೂ ಅಫ್ಘಾನಿಸ್ತಾನ ತಂಡ ವಿರುದ್ಧದ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು ಮಧ್ಯಾಹ್ನ 1:30ಕ್ಕೆ ಟಾಸ್ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದೆ. ಇನ್ನು ಹಾಟ್‌ಸ್ಟಾರ್ – ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಸ್ಥಳ : ದೆಹಲಿ, ಸಮಯ : 2 ಘಂಟೆಗೆ
ಎರಡು ತಂಡದ ಸಂಭಾವ್ಯ ಆಡುವ ಬಳಗ
ಭಾರತ: ರೋಹಿತ್ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಮೊಹಮ್ಮದ್ ನಬಿ, ನಜಿಬುಲ್ಲಾ ಜದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕ್