ಐಸಿಸಿ ವಿಶ್ವಕಪ್ 2023 : ಸೋಲಿನ ಹತಾಶೆ ಗೆಲುವಿನ ಹಾಹಾಕಾರ..! ಇಂದು ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಸೆಣಸಾಟ..!
ICC ODI World CUP 2023 : Voice of janata News Desk : ಬೆಂಗಳೂರು :
ವಿಶ್ವಕಪ್ ಟೂರ್ನಿಯ 25ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಬ್ಯಾಟಿಂಗ್‌ಗೆ ಸ್ವರ್ಗ ಎನಿಸಿಕೊಂಡಿರುವ ಪಿಚ್‌ನಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಇಂಗ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳು ಈ ಬಾರಿಯ ವಿಶ್ವಕಪ್‌ನಲ್ಲಿ ಈವರೆಗೆ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ಎರಡು ತಂಡಗಳು ಕೂಡ ತಲಾ ಒಂದು ಗೆಲುವು ಸಾಧಿಸಿದ್ದರೆ ಮೂರು ಸೋಲು ಅನುಭವಿಸಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಶ್ರೀಲಂಕಾ 8ನೇ ಸ್ಥಾನದಲ್ಲಿ ಹಾಗೂ ಇಂಗ್ಲೆಂಡ್ 9ನೇ ಸ್ಥಾನದಲ್ಲಿದೆ.
ಇಂಗ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳ ವಿರುದ್ಧದ ಪಂದ್ಯ ಗುರುವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ . ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಸಂಭಾವ್ಯ ಆಡುವ ಬಳಗ
ಇಂಗ್ಲೆಂಡ್ ಆಡುವ ಬಳಗ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ/ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್ಸ್ಟೋನ್, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ/ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವ, ಏಂಜೆಲೊ ಮ್ಯಾಥ್ಯೂಸ್, ದುಶನ್ ಹೇಮಂತ, ಮಹೇಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ