ICC World Cup 2023 | ಇಂದು ಅಫ್ಗನ್–ಬಾಂಗ್ಲಾ ಮುಖಾಮುಖಿ
ಐಸಿಸಿ ವಿಶ್ವಕಪ್ 2023 :Bangladesh vs Afghanistan: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ಅಕ್ಟೋಬರ್ 7ರಂದು ಬೆಳಿಗ್ಗೆ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ 3ನೇ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ.
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ (ICC ODI World Cup 2023) ಮೂರನೇ ಪಂದ್ಯದಲ್ಲಿ ಏಷ್ಯನ್ ತಂಡಗಳು ಮುಖಾಮುಖಿಯಾಗುತ್ತಿವೆ. ಬಾಂಗ್ಲಾದೇಶ – ಅಫ್ಘಾನಿಸ್ತಾನ ತಂಡಗಳು (Bangladesh vs Afghanistan) ವಿಶ್ವಕಪ್ನಲ್ಲಿ ಮೊದಲ ಕದನಕ್ಕೆ ಸಿದ್ಧಗೊಂಡಿವೆ. ಬಾಂಗ್ಲಾ ಟೈಗರ್ಸ್-ಅಘ್ಘನ್ ಕದನಕ್ಕೆ ಭಾರತದ ಅತ್ಯಂತ ಸುಂದರ ಮೈದಾನ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (Himachal Pradesh Cricket Association Stadium Pitch Report) ಸಜ್ಜಾಗಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ಉಭಯ ತಂಡಗಳು, ಲಯಕ್ಕೆ ಮರಳುವ ತವಕದಲ್ಲಿವೆ.
ಕಳೆದ ಒಂದು ದಶಕದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿರುವ ಉಭಯ ತಂಡಗಳು ಟೂರ್ನಿಯ ಯಾವುದೇ ಹಂತದಲ್ಲಿಯೂ ಅಚ್ಚರಿಯ ಫಲಿತಾಂಶಗಳನ್ನು ನೀಡುವ ಸಾಮರ್ಥ್ಯ ಹೊಂದಿವೆ. ಈ ಎರಡೂ ತಂಡಗಳು ಶನಿವಾರ ಧರ್ಮಶಾಲಾದ ಹಿಮಾಚಲಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.
ಅಫ್ಘಾನಿಸ್ತಾನ ಸಂಭಾವ್ಯ ತಂಡ
ರಹಮಾನುಲ್ಲಾ ಗುರ್ಬಾಜ್ (ನಾಯಕ), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜಿಬುಲ್ಲಾ ಜದ್ರಾನ್, ಮೊಹಮ್ಮದ್ ನಬಿ, ರಶೀದ್ ಖಾನ್, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಕಿ, ನೂರ್ ಅಹ್ಮದ್.
ಬಾಂಗ್ಲಾದೇಶ ಸಂಭಾವ್ಯ ತಂಡ
ಲಿಟ್ಟನ್ ದಾಸ್, ಮೆಹಿದಿ ಹಸನ್ ಮಿರಾಜ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹ್ಮುದುಲ್ಲಾ, ತೌಹಿದ್ ಹೃದಯೋಯ್, ಮಹೇದಿ ಹಸನ್, ತಸ್ಕಿನ್ ಅಹ್ಮದ್, ತಂಝಿಮ್ ಹಸನ್ ಸಾಕಿಬ್, ಮುಸ್ತಫಿಜುರ್ ರಹಮಾನ್.