ಅವರು ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಶ್ರೀ ಭಾಗ್ಯವಂತಿ ಕನ್ನಡ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 19ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಿಗೆ ಶಿಕ್ಷಣ ನೀಡಿದರೆ ಸಮಾಜದಲ್ಲಿ ಅಪರಾಧ ಕೃತ್ಯಗಳು ಕಡಿಮೆಯಾಗುತ್ತವೆ ಮನೆಯಲ್ಲಿ ಪಾಲಕರು ತಮ್ಮ ಮಕ್ಕಳಿಗೆ ಪಾಠದ ಜೊತೆಗೆ ಸಂಸ್ಕಾರವನ್ನು ನೀಡುವ ಕಾರ್ಯ ಮಾಡಬೇಕು ಎಂದರು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಪ್ರಾಧ್ಯಾಪಕ ಚಂದುಗೌಡ ಬಿರಾದಾರ ಮಾತನಾಡಿ, ಇಂದಿನ ಡಿಜಿಟಲ್ ಯುಗದಲ್ಲಿ ಪಾಲಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಸಮಯದಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ಸಹಿತಗೊಳಿಸಿ ಮಕ್ಕಳ ಪಾಠದ ಕಡೆಗೆ ಲಕ್ಷ ನೀಡಬೇಕು, ಎಂದು ತಾಯಂದಿರು ಮಕ್ಕಳಿಗೆ ಮನೆಯಲ್ಲಿ ವಿದ್ಯಾಭ್ಯಾಸ ಮಾಡಲು ಹೇಳಿ ತಾವು ಮೊಬೈಲ್ ನೋಡುತ್ತಾ ಕುಳಿತಿರುತ್ತಾರೆ, ಹೀಗಾದಾಗ ಮಕ್ಕಳ ಕಲಿಕೆಯ ಬಗ್ಗೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ಪಾಲಕರು ಮನೆಯಲ್ಲಿ ಮಕ್ಕಳ ವಿದ್ಯಾಭ್ಯಾಸದ ಸಮಯದಲ್ಲಿ ಕಡ್ಡಾಯವಾಗಿ ಮೊಬೈಲ್ ಬಳಕೆಯನ್ನು ತೆಗಿತಗೊಳಿಸಿ ಮಕ್ಕಳ ಪಾಠದ ಕಡೆಗೆ ಗಮನ ಹರಿಸಿ ಎಂದು ಸಲಹೆ ನೀಡಿದರು.
ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ ಇಮ್ಮನದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಉಮೇಶ ಬಳಬಟ್ಟಿ, ಮಲ್ಲನಗೌಡ ಪಾಟೀಲ, ಎಸ್. ಸಿ. ಇಂಡಿ, ಬಸವರಾಜ ಗೊರನಾಳ, ಎ.ಜೆ. ಚೌದರಿ, ಬಾಳು ರಾಠೋಡ್, ರಾಜಕುಮಾರ ಪವಾರ, ಅರವಿಂದ ಪಾಟೀಲ, ಶರಣಬಸಪ್ಪ ನಾಟೀಕಾರ, ಸೇರಿದಂತೆ ಇನ್ನಿತರರು ಇದ್ದರು. ಶಾಲಾ ಸಹ ಶಿಕ್ಷಕಿ ಕಾವೇರಿ ಪವಾರ್ ಶಾಲಾ ಮಕ್ಕಳಿಗಾಗಿ ಶುದ್ಧ ಕುಡಿಯುವ ನೀರಿನ ಪ್ಲಾಂಟ್, 32 ಇಂಚಿನ ಒಂದು ಟಿವಿಯನ್ನು ಉಡುಗೊರೆಯಾಗಿ ನೀಡಿದರು.