ಅಕ್ರಮ ಅಕ್ಕಿ ಸಾಗಾಟ,1.19 ಲಕ್ಷ ಮೌಲ್ಯದ ಅಕ್ಕಿ ಜಪ್ತಿ.!
ಇಂಡಿ : ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಆಹಾರ ನಿರೀಕ್ಷಕರು ಹಾಗೂ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. 1.19 ಲಕ್ಷ ಮೌಲ್ಯದ 4270 ಕೆಜಿ ಅಕ್ಕಿಯನ್ನು ಪೊಲೀಸರು ಜಪ್ತಿಗೈದಿದ್ದಾರೆ. ಅಲ್ಲದೇ, ಎಂಎಚ್ 13 ಎಎ 3745 ವಾಹನ ಸ್ಥಳದಲ್ಲಿಯೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಸುಮಾರು 8 ಲಕ್ಷ ವಾಹನ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕಾನೂನು ಕ್ರಮವನ್ನು ತೆಗೆದುಕೊಂಡಿದ್ದಾರೆ. ಈ ಕುರಿತು ಇಂಡಿ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















