ವಿಜಯಪುರ : ಭೀಮಾತೀರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುತ್ತದೆ ಎಂದು ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕಕುಮಾರ್ ಹೇಳಿದರು. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಆಲಮೇಲನಲ್ಲಿ ಮಾತನಾಡಿದ ಅವರು, ಭೀಮಾತೀರದಲ್ಲಿ ಮಟಕಾ, ಗಾಂಜಾ, ಮರಳು ಮಾಫಿಯಾ, ಬೈಕ್ ಕಳ್ಳತನ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ, ಇದೇ ವೇಳೆಯಲ್ಲಿ ಸಾರ್ವಜನಿಕರ ಅಹ್ವಾಲು ಸ್ವೀಕರಿಸಿ, ಸಮಸ್ಯೆಗಳನ್ನು ಈಡೇರಿಸುವ ಭರವಸೆ ನೀಡಿದರು.