ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: 21ನೇ ಶತಮಾನದಲ್ಲಿ ಜಗತ್ತಿನೊಡನೆ ಸ್ಪರ್ಧಿಸಲು ಔಪಚಾರಿಕ ಶಿಕ್ಷಣದ ಜೊತೆಗೆ ಮೌಲ್ಯ ಆಧಾರಿತ ಶಿಕ್ಷಣವು ಇಂದಿನ ಅಗತ್ಯವಾಗಿದೆ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಸ್ ಎಸ್ ಅಂಗಡಿ ಹೇಳಿದರು.
ಪಟ್ಟಣದ ಮಾದರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಡಲಗೇರಿ ಇಲ್ಲಿ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಅವರು ಮಾತನಾಡಿದರು.ಇಂದಿನ ಆಧುನಿಕ ಜಗತ್ತಿನಲ್ಲಿ ಮನುಷ್ಯ ಜೀವಿಸಬೇಕಾದರೆ ಶಿಕ್ಷಣ ಅಗತ್ಯವಾಗಿದೆ ಎಂದು ಪ್ರಾಚಾರ್ಯರಾದ ಮಂಜುಳಾ ಕಟಗೇರಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ಸಂಯೋಜಕರಾದ ರವಿ ಕಟ್ಟಿಮನಿ.ಲತಾಶ್ರೀ ಡಿಪಿ ಸರೋಜಿನಿ ಬಿರಾದಾರ. ಮಹೇಶ್ವರಿ ಹಿರೇಮಠ ರೇವಣಸಿದ್ದಪ್ಪ ಅಮಣ್ಣಿ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಉಪಸ್ಥಿತರಿದ್ದರು.