ಇಂಡಿ : ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ಸಾಲಭಾದೆ, ಬೆಳೆನಷ್ಟ ಬೆಳೆಹಾನಿ, ಬರಗಾಲದಿಂದ ರೈತರು ವಿವಿಧ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ
ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದ್ರೆ ಅದು ರೈತರ ಹಿತ ಕಾಪಾಡುತ್ತೇವೆ ಅಂತಾ ಜನಪ್ರತಿನಿಧಿಗಳು ರೈತರ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸುತ್ತಾರೆ. ಆದರೆ ರೈತರ ಆತ್ಮಹತ್ಯೆ ತಡೆಯುವಲ್ಲಿ ಸರ್ಕಾರಗಳು ವಿಫಲವಾಗಿವೆ.
ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ರೈತರ ಆತ್ಮಹತ್ಯೆಯ ಬಗ್ಗೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಸದನದಲ್ಲಿ ಗಂಭೀರ ಚರ್ಚೆ ಮಾಡಿದರು. ರಾಜ್ಯದಲ್ಲಿ ಬೆಳೆ ಸಾಲ, ಬೆಳೆ ಹಾನಿ ಸೇರಿದಂತೆ ಬರಗಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕಾಗಿ ಸರ್ಕಾರ ರೈತ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಅಲ್ಲದೇ, ಸರ್ಕಾರ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಉತ್ತರಿಸಿದ ಅವರು, ಕಳೆದ 3 ವರ್ಷಗಳಲ್ಲಿ ವಿವಿಧ ಕಾರಣಗಳಿಂದ 868, 884, 635 ಈ ರೀತಿಯಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಉಪವಿಭಾಗ ಅಧಿಕಾರಿಗಳ ಅಧ್ಯಕ್ಷ ತೆಯಲ್ಲಿ ರಚಿಸಲಾದ ಸಮಿತಿಯಲ್ಲಿ ಅನುಮೋದಿಸಿ ಅರ್ಹ ಪ್ರಕರಣಗಳೆಂದು ಪರಿಗಣಿಸಿದ ಪರಿಹಾತ ವಿತರಿಸಲು ಜಿಲ್ಲೆಗಳಿಂದ ಸ್ವೀಕೃತವಾದ ಬೇಡಿಕೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಗೊಳಿಸಲಾಗುತ್ತಿದೆ ಎಂದು ಉತ್ತರಿಸಿದರು.