ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ತುಟ್ಟಿ ಭತ್ಯೆಯನ್ನು ಶೇಕಡ 2.75 ರಷ್ಟು ಹೆಚ್ಚಿಸಲಾಗಿದೆ. ಜನವರಿ 1 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.