78 ನೇ ಸ್ವತಂತ್ರ್ಯೋತ್ಸವ ; ಇಂಡಿಯಲ್ಲಿ ಅರ್ಥಪೂರ್ಣ ಆಚರಣೆಗೆ ಪೂರ್ವಭಾವಿ ಸಭೆ..!
ಮುಂಜಾಗೃತಾವಾಗಿ ಅಗತ್ಯಕ್ರಮ ಕೈಗೊಳ್ಳಿ : ಎಸಿ ಅಬೀದ್ ಗದ್ಯಾಳ..
ಇಂಡಿ : 78 ನೇ ಸ್ವತಂತ್ರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಮಂಗಳವಾರ ಹೇಳಿದರು.
ಸ್ವತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಅಗಸ್ಟ್ 6 ರಂದು ತಾಲ್ಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡಿರುವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.
ಸ್ವತಂತ್ರ್ಯೋತ್ಸವ ದಿನಾಚರಣೆ ನಿಮಿತ್ಯ ಅಗಸ್ಟ್ 15 ರಂದು ಬೆಳಿಗ್ಗೆ 8 ಘಂಟೆಗೆ ತಾಲ್ಲೂಕು ಆಡಳಿತ ಸೌಧದ ಹಾಗೂ ವಿವಿಧ ತಾಲ್ಲೂಕು ಕಛೇರಿ ಹಾಗೂ ಇತರೆ ಕಡೆ ಧ್ವಜಾರೋಹಣ ನೆರವೆರಿಲಿದ್ದು ತದನಂತರ 9 ಘಂಟೆಗೆ ತಾಲ್ಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಸ್ವತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ರಚಿಸಲ್ಪಟ್ಟ ಸಮಿತಿಗಳು ವಹಿಸಲಾದ ಕರ್ತವ್ಯಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಯಾವುದೇ ನಿಯಮ ಉಲ್ಲಂಘನೆ ಯಾಗದಂತೆ ಹಾಗೂ ಸರಕಾರದ ಶಿಷ್ಟಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವು ವ್ಯವಸ್ಥಿತವಾಗಿ ಆಯೋಜನೆ ಮಾಡಬೇಕು ಎಂದು ಸೂಚಿಸಿದರು.
ಅದಲ್ಲದೇ ತಾಲ್ಲೂಕು ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಚತೆ ಹಾಗೂ ಅಲಂಕಾರಕ್ಕೆ, ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ಬಗ್ಗೆ ಹಾಗೂ ಹಿರಿಯ ನಾಗರಿಕರಿಗೆ, ವಿಶೇಷ ವ್ಯಕ್ತಿಗಳಿಗೆ, ಮಹಿಳೆಯರಿಗೆ, ವಿಧ್ಯಾರ್ಥಿಗಳಿಗೆ ಮತ್ತು ಪತ್ರಿಕಾ ಮಾಧ್ಯಮ ದವರಿಗೆ ಸೂಕ್ತ ಅಸನದ ವ್ಯವಸ್ಥೆ ಕಲ್ಪಿಸಬೇಕು. ಇನ್ನೂ ವಿಧ್ಯಾರ್ಥಿಗಳಿಗಾಗಿ ಲಘು ಉಪಾಹಾರದ ವ್ಯವಸ್ಥೆ ಮಾಡಿಕೊಳ್ಳಬೇಕು.
ಸ್ವತಂತ್ರ್ಯೋತ್ಸವದ ಅಂಗವಾಗಿ ನಡೆಯುವ ಪಥಸಂಚಲನಕ್ಕೆ ಪೋಲಿಸ್ ಇಲಾಖೆಯಿಂದ ಅಗತ್ಯ ಪೂರ್ವಭಾವಿ ತರಬೇತಿ ನೀಡಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೆ ಎಸ್ ಆರ್ ಟಿ ಸಿ ಬಸ್ ಸೌಕರ್ಯ ಒದಗಿಸಬೇಕು. ಇನ್ನೂ ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯೊಂದಿಗೆ ಅಂಬುಲೆನ್ಸ್ ಹಾಗೂ ಅಗ್ನಿ ಶಾಮಕ ಇಲಾಖೆಯಿಂದ ವಾಹನ ಒದಗಿಸಬೇಕು. ಶಾಲಾ ಮಕ್ಕಳಿಂದ ನೃತ್ಯ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನಗೈದ ಗಣ್ಯರಿಗೆ ಸನ್ಮಾನಿ ಗೌರವಿಸಲಾಗುವುದು ಎಂದು ಹೇಳಿದರು. ತಹಶಿಲ್ದಾರ ಬಿ ಎಸ್ ಕಡಕಭಾವಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ, ಸಿಪಿಐ ಎಮ್ ಎಮ್ ಡಪ್ಪಿನ, ಕ್ಷೇತ್ರ ಶಿಕ್ಷಣ ಅಧಿಕಾರಿ ಟಿ ಆಸ್ ಆಲಗೂರ, ಕೃಷಿ ಅಧಿಕಾರಿ ಮಹಾದೇವ ಏವೂರ, ಕೆಇಬಿ ಎಸ್ ಆರ್ ಮೆಂಡೆದಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಂಘಟನೆಗಳ ಅಧ್ಯಕ್ಷರು ಮುಖಂಡರು ಉಪಸ್ಥಿತರಿದ್ದರು.