ಭೀಮಾನದಿ ತೀರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!
ಇಂಡಿ : ಅಪರಿಚಿತ ವ್ಯಕ್ತಿಯ ಶವವೊಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಭೀಮಾನದಿ ತೀರದಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ತಾಲೂಕಿನ ಮಿರಗಿ ಗ್ರಾಮದ ಹತ್ತೀರ ಇರುವ ಭೀಮಾ ನದಿ ತೀರದಲ್ಲಿ ಅಪರಿಚಿತ ವ್ಯಕ್ತಿಯ ಶವ ಶುಕ್ರವಾರ ಪತ್ತೆಯಾಗಿರುವ ಘಟನೆ ನಡೆದಿದೆ. ಸುಮಾರು 30-35 ವಯಸ್ಸಿನ ಅಪರಿಚಿತ ಪುರುಷನ ಶವ ಪತ್ತೆ ಆಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.