ಇಂಡಿ : ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಶಾಂತಿ ಸಭೆ..! ಡಿವಾಯ್ಎಸ್ಪಿ ಖಡಕ ಸಂದೇಶ
ಇಂಡಿ :ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಡಿವಾಯ್ಎಸ್ಪಿ ನೇತೃತ್ವದಲ್ಲಿ ಸಮಾಜದ ಮುಖಂಡರೊಂದಿಗೆ ಕೋಮು ಸೌಹಾರ್ದತೆಗಾಗಿ ಶಾಂತಿ ಸಭೆ ನಡೆಯಿತು. ಈ ಸಭೆಯಲ್ಲಿ ಸಮಾಜದ ಮುಖಂಡರ ಹಾಗೂ ಗಜಾನನ ಮಂಡಳಿ ಆಯೋಜಕರು ಬೇಡಿಕೆಗಳನ್ನು ಆಲಿಸಿದ ಅಧಿಕಾರಿಗಳು, ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಪಟ್ಟಣದ ಡಿವಾಯ್ಎಸ್ಪಿ ಕಚೇರಿ ಸಭಾಗಂಣದಲ್ಲಿ ಆಯೋಜಿಸಿದ್ದ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಪ್ರಯುಕ್ತವಾಗಿ ಪೂರ್ವಭಾವಿ ಸಭೆ ನಡೆಯಿತು. ಹಿಂದೂ, ಮುಸ್ಲಿಂ ಸಮಾಜದ ಮುಖಂಡರುಗಳು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಗಣೇಶ ಮಂಡಳಿಗಳಿಗೆ ಉಚಿತ ವಿದ್ಯುತ್ ಸಂಪರ್ಕ ನೀಡಬೇಕು. ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ ಮೆರವಣಿಗೆ ತೆರಳುವ ಮಾರ್ಗ ಸುಧಾರಣೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಈ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿವಾಯ್ಎಸ್ಪಿ ಎಚ್ ಜಗದೇಶ್, ಪರಿಸರಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹಸಿರು ಪಟಾಕಿ, ಡಿಜೆ ಸೌಂಡ್ ಬಳಕೆಯ ನಿಷೇಧದ ಬಗ್ಗೆ ಗಣೇಶ ಮಂಡಳಿಗಳಿಗೆ ಸೂಚಿಸಿದರು. ಯಾವುದೇ ರೀತಿಯಲ್ಲಿ ಸಾರ್ವಜನಿಕ ತೊಂದರೆಯಾಗಬಾರದು, ಸರಕಾರದ ಮಾರ್ಗಸೂಚಿ ಪಾಲಿಸಬೇಕು ಎಂದು ತಿಳಿಸಿದರು. ಶಾಂತಿ ಸೌಹಾರ್ದತೆಯಿಂದ ಗಣೇಶೋತ್ಸವ, ಈದ್ ಮಿಲಾದ್ ಹಬ್ಬಾಚರಣೆ ಮಾಡುವಂತೆ ಸೂಚಿಸಿದರು. ಹಬ್ಬದ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು. ಹಿಂಬಾಗಿಲಿನಿಂದ ಮಾರಾಟಕ್ಕೆ ಕಡಿವಾಣ ಹಾಕಬೇಕು. “ಸದ್ಯ ಗಣೇಶ ಮೂರ್ತಿ ವಿಸರ್ಜನೆಗೆ ಪುರಸಭೆ ವತಿಯಿಂದ ತಾತ್ಕಾಲಿಕ ಹೊಂಡ ನಿರ್ಮಿಸಲಾಗುತ್ತದೆ. ಕಾನೂನು ಪಾಲನೆ ಜೊತೆಗೆ ಪೊಲೀಸರೊಂದಿಗೆ ಸಹಕರಿಸಿ ಹಬ್ಬಾಚರಣೆಗೆ ಮುಂದಾಗಿ. ಹಬ್ಬಗಳ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮನವಿ ಮಾಡಿಕೊಂಡಿರುವ ಪೊಲೀಸರು, ಕಾನೂನು ಸುವ್ಯವಸ್ಥೆಗೆ ಅಡ್ಡಿಯುಂಟು ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಮುಖಂಡ ರೈಸ್ ಅಷ್ಟೇಕರ ಮಾತನಾಡಿದ ಅವರು, ಇಲ್ಲಿಯವರೆಗೆ ಪಟ್ಟಣದ ಎಲ್ಲಾ ಹಬ್ಬಗಳು ಶಾಂತಿ ಸೌಹಾರ್ದತೆಯಲ್ಲಿ ಆಚರಣೆ ಮಾಡುತ್ತಾ ಬಂದಿದ್ದೆವೆ. ಈಗಲೂ ಸಹ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ, ಪಿಐ ರತನಕುಮಾರ ಜಿರಗ್ಯಾಳ ಸೇರಿದಂತೆ ಇನ್ನೂ ಅನೇಕ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಮತ್ತು ಗಜಾನನ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.