ಇಂಡಿ ಹಿರಿಯ ಶ್ರೇಣಿಯ ನ್ಯಾಯಾಲಯ : ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಅಹ್ವಾನ
ಇಂಡಿ : ತಾಲ್ಲೂಕಿನ ಹಿರಿಯ ಶ್ರೇಣಿಯ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಹಿನ್ನೆಲೆಯಲ್ಲಿ ಅರ್ಜಿ ಅಹ್ವಾನಿಸಲಾಗಿದೆ.
ಅಪರ ಸರ್ಕಾರಿ ವಕೀಲರ ಹುದ್ದೆಗೆ 26(3)ರಡಿ ಹುದ್ದೆಯ ಪ್ರಭಾರವನ್ನು ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ನೇಮಕ ಮಾಡಿದ್ದು, ಸದರಿ ಹುದ್ದೆಯನ್ನು ಹೊಸದಾಗಿ ಭರ್ತಿ ಮಾಡಲು ಉದ್ದೇಶಿಸಿಲಾಗಿರುವುದರಿಂದ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಶರತ್ತುಗಳ) ನಿಯಮಗಳು 1977 ರ ನಿಯಮ 5 ಮತ್ತು 26(2) ಹಾಗೂ 12(ಎ) (ಬಿ) ಮತ್ತು (ಸಿ) ರನ್ವಯ 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು, 06 ಸೆಪ್ಟೆಂಬರ್ ಸಾಯಂಕಾಲ 5:30 ಗಂಟೆಯೊಳಗಾಗಿ ಅರ್ಜಿಯನ್ನು ಅವಶ್ಯ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಲು ತಿಳಿಸಿದೆ. ತದನಂತರ ಸ್ವೀಕೃತವಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪತ್ರಿಕೆ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ಟಿ ಭೂಬಾಲನ್ ತಿಳಿಸಿದ್ದಾರೆ.