ಜೆ.ಡಿ.ಎಸ್. ಡಿಜಿಟಲ್ ಯೋಧರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗಿ..!
ಯುವಜನರು ಜೆಡಿಎಸ್ ಡಿಜಿಟಲ್ ಯೋಧರು : ನಿಖಿಲ್ ಕುಮಾರಸ್ವಾಮಿ
ಇಂಡಿ ಜೆಡಿಎಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ನಿಯಾಜ್ ಗೆ ಗೌರವ ಸನ್ಮಾನ್..!
ವೈಸ್ ಆಫ್ ಜನತಾ ನ್ಯೂಜ್ ಡೆಸ್ಕ್ : ಜೆಡಿಎಸ್ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಅರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ಉತ್ಸಾಹಿ ಯುವಜನರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪಾಲ್ಗೊಂಡು ಮಾತನಾಡಿದರು.
ಈ ಯುವಜನರನ್ನು ಜೆಡಿಎಸ್ ಡಿಜಿಟಲ್ ಯೋಧರು ಎಂದು ಕರೆದ ನಿಖಿಲ್ ಅವರು, ನಾನು ಕೂಡ ಯುವಕ. ನಮ್ಮ ಪಕ್ಷದಲ್ಲಿ ಇಷ್ಟೋಂದು ಯುವಜನರು ಜಾಲತಾಣಗಳಲ್ಲಿ ನನಗೆ ಬಹಳ ಸಂತೋಷ ಉಂಟು ಮಾಡಿದೆ. ಪಕ್ಷಕ್ಕೆ ಅಧಿಕಾರ ಇರಲಿ, ಇಲ್ಲದಿರಲಿ ಪ್ರತಿ ಸಂದರ್ಭದಲ್ಲಿಯೂ ಯೋಧರಂತೆ ಪಕ್ಷಕ್ಕಾಗಿ ದುಡಿಯುತ್ತಿರುವ ನಿಮಗೆ ಕೃತಜ್ಞಿ ಆಗಿದ್ದೇನೆ ಎಂದರು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಅವರು ಮಾತನಾಡಿ, ಜೆಡಿಎಸ್ ಡಿಜಿಟಲ್ ಯೋಧರಿಗೆ ಕೆಲ ಮಹತ್ವಪೂರ್ಣ ಟಿಪ್ಸ್ ಗಳನ್ನು ನೀಡಿದರು.
ಇನ್ನೂ ಇದೇ ಸಂದರ್ಭದಲ್ಲಿ ಇಂಡಿ ಜೆಡಿಎಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ನಿಯಾಜ್ ಅಗರಖೇಡ ಸನ್ಮಾಸಿ ಗೌರವಿಸಿದರು.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಪಕ್ಷದ ವಕ್ತಾರರಾದ ಗಂಗಾಧರ ಮೂರ್ತಿ, ಹೆಚ್.ಎನ್.ದೇವರಾಜ್ ಸೇರಿದಂತೆ ಅನೇಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಇನ್ನೂ ಇಂಡಿಯ ನಿಂಗರಾಯ ಹಿರೆಕುರಬರ, ಇರ್ಫಾನ್ ಅಗರಖೇಡ, ರಾಜು ಮುಲ್ಲಾ ಸಭೆಯಲ್ಲಿ ಉಪಸ್ಥಿತರಿದ್ದರು.