ಇಂಡಿ | ಮೂಕ ಅಪ್ರಾಪ್ತೆಯ ಬಾಲಕಿಯ ಮೇಲೆ ಅತ್ಯಾಚಾರ
ಇಂಡಿ: 17 ವರ್ಷದ ಮೂಕ ಅಪ್ರಾಪ್ತೆಯ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಹಿರೇರೂಗಿ ಗ್ರಾಮದಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ವೆಸಿಗಿರುವ ಘಟನೆ ಭಾನುವಾರ ಸಾಯಂಕಾಲ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ರೂಗಿ ಗ್ರಾಮದಲ್ಲಿ ರೂಗಿ ಗ್ರಾಮದ ..?.. ( ಹೆಸರು ಬದಲಿಸಲಾಗಿದೆ) ಎಂಬ ಮೂಕ ಬಾಲಕಿಯ ಮೇಲೆ ಅದೇ ಗ್ರಾಮದ ಲಾಳಸಂಗಿ ಧರೆಪ್ಪ ಎಂಬುವನು ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿಯ ತಾಯಿ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ, ಮೂಕ ಬಾಲಕಿಯನ್ನು ನಿಂಬೆ ಗಿಡದಲ್ಲಿ ಒಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಬಾಲಕಿಯ ತಾಯಿ ಪ್ರಕರಣ ದಾಖಲಿಸಿದ್ದು ತನಿಖೆ ಮುಂದುವರಿದಿದೆ.