VOICE OF JANATA DESK NEWS :
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ 2023ರ (ICC World Cup 2023) ಕೊನೆಯ ಲಿಗ್ ಪಂದ್ಯದಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಐಸಿಸಿ ಏಕದಿನ ವಿಶ್ವಕಪ್ 2023ರ 45ನೇ ಹಾಗೂ ಲೀಗ್ನ ಕೊನೆಯ ಪಂದ್ಯದಲ್ಲಿ ನವೆಂಬರ್ 12ರ ಭಾನುವಾರ ಭಾರತ ಮತ್ತು ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿನೊಂದಿಗೆ ಲೀಗ್ ಹಂತಕ್ಕೆ ವಿದಾಯ ಹೇಳಲು ಸಜ್ಜಾಗಿವೆ. ಇಂದಿನ ಪಂದ್ಯ ಗೆದ್ದರೆ ಟೂರ್ನಿಯಲ್ಲಿ ರೋಹಿತ್ ಶರ್ಮಾ ಪಡೆಯು ಅಜೇಯ ಸೆಮಿಫೈನಲ್‌ಗೆ ಮುನ್ನಡೆಯಲಿದೆ
ಹೌದು ಇಂದು ಭಾರತ-ನೆದರ್ಲೆಂಡ್ ನಡುವೆ ಇಂದು ಕೊನೆಯ ಲೀಗ್ ಪಂದ್ಯ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಪಂದ್ಯ ಶುರುವಾಗಲಿದ್ದು, ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸುವ ಸಾಧ್ಯತೆ ಇದೆ. ಈಗಾಗಲೇ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅದೇ ರೀತಿಯಾಗಿ ಸ್ಟೇಡಿಯಂ ಸುತ್ತಮುತ್ತ ಇಂದು ಬೆಳಗ್ಗೆ 7ರಿಂದ ರಾತ್ರಿ 11 ಗಂಟೆವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಇಂದು ಬೆಂಗಳೂರು ಗೆಲುವಿನ ನೆಚ್ಚಿನ ತಂಡವಾಗಿದೆ. ಆದರೆ ಡಚ್ಚರು ಗೆಲುವಿನೊಂದಿಗೆ ತವರಿಗೆ ತೆರಳಲು ಹವಣಿಸುತ್ತಿದೆ.ಹಾಗಾಗಿ ಕೊನೆಯ್ ಲಿಗ್ ಮ್ಯಾಚ್ ಕೂತಹಲದಿಂದ ಕೂಡಿದೆ.
ಭಾರತ ಆಡುವ ಬಳಗ
IND vs NED ODI World Cup 2023
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್.
ನೆದರ್ಲೆಂಡ್ಸ್ ಆಡುವ ಬಳಗ
IND vs NED ODI World Cup 2023:
ಮ್ಯಾಕ್ಸ್ ಓ ಡೌಡ್, ವಿಕ್ರಮಜಿತ್ ಸಿಂಗ್, ಕಾಲಿನ್ ಅಕರ್ಮನ್, ಸ್ಕಾಟ್ ಎಡ್ವರ್ಡ್ಸ್ (ನಾಯಕ), ತೇಜಾ ನಿಡಮನೂರು, ಬಾಸ್ ಡಿ ಲೀಡೆ, ಸಾಕಿಬ್ ಜುಲ್ಫಿಕರ್, ಲೋಗನ್ ವ್ಯಾನ್ ಬೀಕ್, ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್
ನೇರಪ್ರಸಾರ
IND vs NED ODI World Cup 2023
ಭಾರತ ನೆದರ್ಲೆಂಡ್ಸ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮಿಂಗ್ ನೋಡಬಹುದು.