India vs New Zealand ODI World Cup 2023 Semi-Final
Voice Of Janata DesK News :ICC ODI Men’s World CUP ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು (ಬುಧವಾರ) ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸಲಿವೆ.
ಹೌದು ಮುಂಬೈನ ವಾಂಖೆಡೆ ಮೈದಾನದಲ್ಲಿ ನವೆಂಬರ್ 15ರ ಗುರುವಾರ ಸತತ ಗೆಲುವು ಸಾಧಸಿದ ಭಾರತ ಮತ್ತು ಅಂಕದಲ್ಲಿ ನಾಲ್ಕನೇ ಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್ ತಂಡಗಳು ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.
ಏಕದಿನ ವಿಶ್ವಕಪ್ 2023 (ICC ODI World Cup 2023) ಅಂತಿಮ ಘಟ್ಟ ತಲುಪಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು (ನವೆಂಬರ್ 15ರ ಬುಧವಾರ) ಭಾರತ ಮತ್ತು ನ್ಯೂಜಿಲ್ಯಾಂಡ್ (India vs New Zealand) ತಂಡಗಳು ಮೊದಲನೆ ಸೆಮಿಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಲೀಗ್ ಹಂತದಲ್ಲಿ ಆಡಿದ ಎಲ್ಲಾ 9 ಪಂದ್ಯಗಳಲ್ಲಿ ಗೆದ್ದಿರುವ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಅಜೇಯವಾಗಿ ಸೆಮೀಸ್ ಪ್ರವೇಶಿಸಿದೆ. ಅತ್ತ ನಾಲ್ಕನೇ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿರುವ ಕಿವೀಸ್, ಸತತ ಎರಡನೇ ವಿಶ್ವಕಪ್ ಆವೃತ್ತಿಯಲ್ಲಿ ಭಾರತ ತಂಡವನ್ನು ಸೆಮಿಫೈನಲ್ ಪಂದ್ಯದಲ್ಲಿ ಎದುರಿಸುತ್ತಿದೆ.
ಟೀಂ ಇಂಡಿಯಾ ಆಡುವ 11 ಆಟಗಾರರು
ಭಾರತ : ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.
ನ್ಯೂಜಿಲೆಂಡ್ ಆಡುವ 11ರ ಆಟಗಾರರು
ನ್ಯೂಜಿಲೆಂಡ್ : ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲಥಾಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್, ಟೀಮ್ ಸೌಥಿ.
ಪಂದ್ಯ: ಭಾರತ-ನ್ಯೂಜಿಲೆಂಡ್, ಐಸಿಸಿ ಪುರುಷರ ವಿಶ್ವಕಪ್ 2023 ಸೆಮಿ ಫೈನಲ್
ದಿನಾಂಕ: ನವೆಂಬರ್ 15, 2023 ಬುಧವಾರ
ಸಮಯ: ಮಧ್ಯಾಹ್ನ 2 ಗಂಟೆ
ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್
ಲೈವ್ ಸ್ಟ್ರೀಮ್: ಡಿಸ್ನಿ ಪ್ಲಸ್ ಹಾಟ್ ಸ್ಟಾರ್