ಅಫಜಲಪುರ : ನಂಬಿಕೆ, ಪ್ರೀತಿ, ವಿಶ್ವಾಸಕ್ಕೆ ಪಾತ್ರವಾದ ಬ್ರಾಹ್ಮಣರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ. ಭಾರತದ ಸಂಸ್ಕೃತಿ, ಹಿಂದು ಧರ್ಮ ಉಳಿಯುವಲ್ಲಿ ಈ ಸಮುದಾಯದ ಕೊಡುಗೆ ಅಪಾರ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಅವರು ತಾಲೂಕಿನ ಮಣ್ಣೂರ ಗ್ರಾಮದ ಶ್ರೀ, ವೇದೇಶತೀರ್ಥ ವಿದ್ಯಾಪೀಠದಲ್ಲಿ ಜರುಗಿದ 6 ನೇ ಶ್ರೀಮನ್ಯಾಯಸುಧಾ ಮಂಗಲ ಮಹೋತ್ಸವ ಹಾಗೂ ಉತ್ತರಾದಿ ಮಠಾಧೀಶರಾದ ಶ್ರೀ 1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಜನ್ಮ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾವಿರಾರು ವರ್ಷದಿಂದ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿರುವ ಬ್ರಾಹ್ಮಣ ಸಮುದಾಯ ವಿಶೇಷ ಗೌರವ ಹೊಂದಿದೆ. ಭಾರತಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಅಂದಿನಿಂದಲೂ ಬ್ರಾಹ್ಮಣರು ತಮ್ಮದೇ ಆದ ಗೌರವ ಹೊಂದಿದ್ದಾರೆ. ಭಾರತೀಯ ಸಂಸ್ಕೃತಿ, ಆಚಾರ ವಿಚಾರ ವಿಶ್ವಮಾನ್ಯವಾಗಲು ಬ್ರಾಹ್ಮಣ ಸಮುದಾಯ ಕಾರಣ ಎಂದು ಹೇಳಿದರು. ಉತ್ತರಾದಿ ಮಠಾಧೀಶರಾದ ಸತ್ಯಾತ್ಮತೀರ್ಥ ಶ್ರೀಪಾದಂಗಳವರು, ಹಾಗೂ ಅದಮಾರು ಮಠದ ಈಶಪ್ರೀಯ ತೀರ್ಥರ ದಿವ್ಯ ಸಾನಿಧ್ಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಿದ್ವಾಂಸರಾದ ವಿದ್ಯಾಸಿಂಹಾಚಾರ್ಯ ಮಾಹುಲಿ ಮಧ್ವಾಚಾರ್ಯ ಮೊಕಾಶಿ ಅನಂತಾಚಾರ್ಯ ಅಕಮಂಚಿ, ಸರ್ವೇಶಾಚಾರ್ಯ ಅಕಮಂಚಿ ಸೇರಿದಂತೆ ಹಲವಾರು ಪಂಡಿತರು ಇದ್ದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ರದ್ದೆವಾಡಿ ಜಿ.ಪಂ ಮಾಜಿ ಸದಸ್ಯ ಅರುಣಕುಮಾರ ಎಂ ಪಾಟೀಲ ಕಲಬುರಗಿ ಬಿಜೆಪಿ ಮುಖಂಡ ರಾಘವೇಂದ್ರ ಕೋಗನೂರ, ಗ್ರಾ.ಪಂ ಮಾಜಿ ಅಧ್ಯಕ್ಷ ರಮೇಶ ಬಾಕೆ, ಎಪಿಎಂಸಿ ಮಾಜಿ ನಿರ್ದೇಶಕ ಗುರುಬಾಳ ಜಕಾಪೂರ, ಯಲ್ಲಮ್ಮದೇವಿ ಟ್ರಸ್ಟ್ ಕಮಿಟಿ ಅಧ್ಯಕ್ಷ ಮಹಾದೇವಪ್ಪ ಕರೂಟಿ, ಸಾ.ಸಿ. ಬೆನಕನಹಳ್ಳಿ, ಸಿದ್ರಾಮಪ್ಪ ಹಿರೇಕುರುಬರ ಸೆರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಇದ್ದರು.
ವರದಿ: ಉಮೇಶ್ ಅಚಲೇರಿ ಕಲ್ಬುರ್ಗಿ