ಭಾರತೀಯ ಸಂಸ್ಕೃತಿ ವಿಶ್ವಕ್ಕೆ ಮಾದರಿಯಾಗಿದೆ ; ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ
ಸರಕಾರ ವಿಶೇಷ ಅನುದಾನ ನೀಡುವ ಮೂಲಕ ಮಠಗಳ ಅಭಿವೃದ್ಧಿಗೆ ಶ್ರಮಿಸಿ ಬೇಕಾಗಿದೆ ; ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ.
ಇಂಡಿ : ಕನ್ನಡ ನಾಡಿಗೆ ಅನ್ನ ದಾಸೋಹ ಮತ್ತು ಅಕ್ಷರ ದಾಸೋಹದ ಮೂಲಕ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಜ್ಞಾನ ಒದಗಿಸುವಲ್ಲಿ ಮಠ-ಮಾನ್ಯಗಳ ಕೊಡುಗೆ ಅಪಾರವಾಗಿದೆ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.
ತಾಲೂಕಿನ ಸುಕ್ಷೇತ್ರ ಲಚ್ಯಾಣದ ಕೈವಲ್ಯಧಾಮ ಸದ್ಗುರು ಶ್ರೀ ಸಿದ್ಧಲಿಂಗ ಮಹಾರಾಜರ 96ನೇ ಪುಣ್ಯರಾಧನೆಯ ಕಾರ್ಯಕ್ರಮದಲ್ಲಿ ಅತಿಥಿ ಸ್ಥಾನ ವಹಿಸಿ ಮಾತಾನಾಡಿದರು.
ಮಠ-ಮಾನ್ಯಗಳಿರುವುದರಿಂದ ಶ್ರೀಸಾಮಾನ್ಯರು ಉನ್ನತ ಶಿಕ್ಷಣ ಪಡೆದು, ಪ್ರಪಂಚದ ಮೂಲೆ ಮೂಲೆಯಲ್ಲಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ. ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ತಾಯಂದಿರ ಪಾತ್ರ ಮುಖ್ಯವಾಗಿದ್ದು, ಭಾರತೀಯ ಸಂಸ್ಕೃತಿ ವಿಶ್ವಕ್ಕೆ ಮಾದರಿಯಾಗಿದೆ. ಈ ನಿಟ್ಟಿನಲ್ಲಿ ಇಂದಿನ ಪುಣ್ಯಾರಾಧನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾಯಂದಿರು ಭಾಗವಹಿಸಿದ್ದು, ಅಭಿಮಾನದ ಸಂಗತಿ. ಎಲ್ಲ ಸಮುದಾಯದ ಮಠ-ಮಾನ್ಯಗಳಿಗೆ ಸರಕಾರ ವಿಶೇಷ ಅನುದಾನ ನೀಡುವ ಮೂಲಕ ಮಠಗಳ ಅಭಿವೃದ್ಧಿಗೆ ಶ್ರಮಿಸಿ ಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಪುರಾಣ ಪ್ರವಚನ ಪ.ಪೂ ದ್ರಾಕ್ಷಿಯಿಣಿ ಅಮ್ಮವರು ಪತ್ರಿ ಮಠ ಹೂವಿನ ಹಿಪ್ಪರಗಿ, ಪ.ಪೂ ಶ್ರೀ ಜಿ ಸಿದ್ದೇಶ್ವರ ಸ್ವಾಮೀಜಿ ಹೀರೂರ, ಲಚ್ಯಾಣ ಮಠದ ಪ. ಪೂ ಬಂಥನಾಳ ವೃಷಭಲಿಂಗಶ್ವರ ಸ್ವಾಮೀಜಿ, ಶ್ರೀಮಂತ ಇಂಡಿ, ಶಾಂತು ಕಂಬಾರ ಉಪಸ್ಥಿತರಿದ್ದರು.