ಇಂಡಿ| ಹುತಾತ್ಮರ ಸ್ಮರಣಾರ್ಥ, ಮೌನಾಚರಣೆ
ಇಂಡಿ : ದೇಶಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ ಹೋರಾಟಗಾರರು ಹಾಗೂ ಯೋಧರನ್ನು ಸ್ಮರಣೆ ಮಾಡುವ ದಿನವೇ ಹುತಾತ್ಮರ ದಿನ ಎಂದು ಕಂದಾಯ ಉಪವಿಭಾಗ ಅಧಿಕಾರ ಅಬೀದ್ ಗದ್ಯಾಳ ತಾಲೂಕು ಆಡಳಿತ ಸೌಧದಲ್ಲಿ ಹೇಳಿದರು.
ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತ ಹುತಾತ್ಮರ ಸ್ಮರಣಾರ್ಥ ಜನವರಿ 30 ರಂದು ಮೌನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಬ್ರಿಟಿಷರ ಕೈಯಿಂದ ಭಾರತವನ್ನು ಸ್ವಾತಂತ್ರ್ಯಗೊಳಿಸಲು ಕೆಲ ಹೋರಾಟಗಾರರು ಕ್ರಾಂತಿಕಾರಿ ಮಾರ್ಗವನ್ನು ಅನುಸರಿಸಿದ್ದರು. ಆದರೆ ಮಹಾತ್ಮ ಗಾಂಧೀಜಿ ಅಹಿಂಸಾ ಮಾರ್ಗವನ್ನು ಅನುಸರಿಸಿ, ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ಬ್ರಿಟಿಷರಲ್ಲಿ ನಡುಕ ಹುಟ್ಟಿಸಿದ್ದರು. ಹೀಗೆ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಗಾಂಧೀಜಿಯವರ ಪಾತ್ರ ಅಪಾರವಾದದ್ದು. ಆದರೆ, 1948, ಜನವರಿ 30ರಂದು ಮಹಾತ್ಮ ಗಾಂಧೀಜಿಯವರನ್ನು ನಾಥೂರಾಮ್ ಗೋಡ್ಸೆ ದೆಹಲಿಯ ಬಿರ್ಲಾ ಹೌಸ್ನಲ್ಲಿ ಹತ್ಯೆ ಮಾಡಲಾಯಿತು. ಈ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು ಗಾಂಧಿಯವರ ಸ್ಮರಣಾರ್ಥವಾಗಿ ಮಾತ್ರವಲ್ಲದೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಶೌರ್ಯವನ್ನು ನೆನಪಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.