ಮುದ್ದೇಬಿಹಾಳ:ಸಾರ್ವಜನಿಕರು ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಬೇಟಿಗೆ ಬಂದಾಗ ಸಹಕರಿಸಬೇಕು ಎಂದು ಪುರಸಭೆ ಅಧ್ಯಕ್ಷ ಮಹಿಬೂಬು ಗೊಳಸಂಗಿ ಹೇಳಿದರು.
ಪಟ್ಟಣದ ಹೊರಪೇಟೆ ನಗರದಲ್ಲಿ ಶುಕ್ರವಾರದ ಲಾರ್ವ ಸಮೀಕ್ಷೆಗೆ ಚಾಲನೆ ನೀಡಿ ಅವರು ಮಾತನಾಡಿ ನೀರಿನ ತಾಣಗಳನ್ನು ಭದ್ರವಾಗಿ ಮುಚ್ಚಿಡಬೇಕು ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕು ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿದರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದು ಪುರಸಭೆಯಿಂದ ಎಲ್ಲ ರೀತಿಯ ಸಹಕಾರ ನೀಡಲು ಸಾಧ್ಯ ಎಂದರು.
ಲಾರ್ವ ಸಮೀಕ್ಷೆ ಕುರಿತು ತಾಲೂಕಾ ಆರೋಗ್ಯ ಅಧಿಕಾರಿ ಡಾ.ಸತೀಶ ತಿವಾರಿ ಮಾತನಾಡಿ ಸಾಂಕ್ರಾಮಿಕ ರೋಗಗಳ ಮುನ್ನೆಚ್ಚರಿಕೆಯಾಗಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರಿಂದ ನಿರಂತರ ಲಾರ್ವ್ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು ಡೆಂಗ್ಯೂ ಈಡಿಸ್ ಎಂಬ ಸೊಳ್ಳೆಗಳಿಂದ ಹರಡುವ ಸೋಂಕು ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳಾದ ಹೂವಿನ ಕುಂಡ, ಬೀಸಾಕಿದ ಟೈರ್, ಹಳೆಯ ಎಣ್ಣೆಯ ಡ್ರಮ್, ನೀರು ಸಂಗ್ರಹಿಸುವ ತೊಟ್ಟಿ ಇವುಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಆದ್ದರಿಂದಲೇ ಮಳೆಗಾಲದಲ್ಲಿ ಸೋಂಕು ಹೆಚ್ಚಾಗಿ ಹರಡುತ್ತವೆ. ಆದ್ದರಿಂದ ಇವುಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ಡೆಂಗ್ಯೂ ತಡೆಗಟ್ಟಲು ಸೊಳ್ಳೆಗಳನ್ನು ನಿಯಂತ್ರಿಸಬೇಕು ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರವಹಿಸಿ ನೀರು ಶೇಖರಣಾ ತೊಟ್ಟಿ, ಟ್ಯಾಂಕ್‌ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಿಡಿ ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬೇಡಿ ಮನೆಯ ಸುತ್ತಲು ಹಾಗೂ ತಾರಸಿಯ ಮೇಲೆ ನೀರು ನಿಲ್ಲದಂತೆ ಎಚ್ಚರವಹಿಸಿ ತೆಂಗಿನ ಚಿಪ್ಪು, ಟಯರ್ ನಂತಹ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ.ತೊಟ್ಟಿ, ಬಿಂದಿಗೆ, ಡ್ರಮ್‌ಗಳಲ್ಲಿ 2-3 ದಿನಕ್ಕೊಮ್ಮೆ ನೀರು ಬದಲಿಸಿ ಸ್ವಚ್ಛಗೊಳಿಸಲು ತಿಳಿಸಲಾಗುತ್ತದೆ ಎಂದರು.
ಇದೇ ವೇಳೆ ವೈದ್ಯಾಧಿಕಾರಿ ಡಾ. ಸಂಗಮೇಶ ದಶವಂತ ಹಾಗೂ ಮೇಲ್ವಿಚಾರಕರು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾ.ಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಲಾರ್ವ್ ತಾಣಗಳನ್ನು ಪರಿಶೀಲನೆ ಮಾಡಿ ಜನರಿಗೆ ಸೊಳ್ಳೆಗಳಿಂದ ಹರಡುವ ರೋಗಗಳಾದ ಡೆಂಗ್ಯೂ,ಚಿಕುನ್ ಗುನ್ಯಾ, ಮಲೇರಿಯಾ, ಆನೆಕಾಲು ರೋಗ, ಜಿಕಾ ಮುಂತಾದ ರೋಗಳ ನಿಯಂತ್ರಣ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು ಲಾರ್ವ್ ಸಮೀಕ್ಷೆ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಯಲ್ಲಪ್ಪ ಚಲವಾದಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಂ ಎಸ್ ಗೌಡರ, ಎಸ್ ಐ ಕಮಲಪ್ಪನವರ ಎಸ್ ಆರ್ ಸಜ್ಜನ, ಇಸ್ಮಾಯಿಲ್ ವಾಲಿಕಾರ, ವ್ಹಿ ಬಿ ಡಿ ಮೇಲ್ವಿಚಾರಕ ಎಸ್ ಸಿ ರುದ್ರವಾಡಿ, ಸಂಗೀತಾ ಬಸರಕೋಡ, ಆಶಾ ಕಾರ್ಯಕರ್ತೆಯರು ಸೇರಿದಂತೆ ಉಪಸ್ಥಿತರಿದ್ದರು.