ಐಸಿಸಿ ವಿಶ್ವಕಪ್ 2023; ಹಾಲಿ ಚಾಂಪಿಯನ್ ಗೆ ಬಾಂಗ್ಲಾದೇಶ ಪೈಪೋಟಿ ನೀಡುತ್ತಾ..!
Voice Of Janata News Desk :ಐಸಿಸಿ ವಿಶ್ವಕಪ್ 2023ವಿಶ್ವಕಪ್ನಲ್ಲಿ ಮಂಗಳವಾರ ಡಬಲ್ ಹೆಡ್ಡರ್ ಪಂದ್ಯಗಳು ಆಯೋಜನೆಯಾಗಲಿದೆ. ಇಂಗ್ಲೆಂಡ್ ತಂಡ ಬಾಂಗ್ಲಾದೇಶವನ್ನು ಎದುರಿಸಲಿದ್ದು ಈ ಪಂದ್ಯಕ್ಕೆ ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಇಂಗ್ಲೆಂಡ್ ತಂಡ ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದು ಬಾಂಗ್ಲಾದೇಶ ಹಾಲಿ ಚಾಂಪಿಯನ್ನರಿಗೆ ಪೈಪೋಟಿ ನೀಡುವ ವಿಶ್ವಾಸದಲ್ಲಿದೆ.
ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಇನ್ನು ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶ ವಿರುದ್ಧದ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 10:30ಕ್ಕೆ ಆರಂಭ – ವಾಗಲಿದ್ದು ಬೆಳಿಗ್ಗೆ 10 ಗಂಟೆಗೆ ಟಾಸ್ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್ಸ್ಪೋರ್ಟ್ಸ್ನಲ್ಲಿ ಇರಲಿದೆ. ಇನ್ನು ಹಾಟ್ಸ್ಟಾರ್ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಸಂಭಾವ್ಯದಲ್ಲಿ ಎರಡು ತಂಡದ ಆಡುವ ಬಳಗ:
ಇಂಗ್ಲೆಂಡ್: ಜಾನಿ ಬೈರ್ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ/ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್ಸ್ಟನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ಬಾಂಗ್ಲಾದೇಶ : ತಂಜಿದ್ ಹಸನ್, ಲಿಟ್ಟನ್ ದಾಸ್, ಮೆಹಿದಿ ಹಸನ್ ಮಿರಾಜ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯ್, ಮಹಮ್ಮದುಲ್ಲಾ, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರಹಮಾನ್