ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ ತಾಳಿಕೋಟಿಯಲ್ಲಿ ಇಂದಿರಾ ಕ್ಯಾಂಟೀನ ಕಟ್ಟದ ಕಾಮಗಾರಿ ಪರಿಶೀಲನೆ
ಕಾಮಗಾರಿಗೆ ವೇಗ ನೀಡಿ ಪೂರ್ಣಗೊಳಿಸಲು ಸೂಚನೆ
ವಿಜಯಪುರ : ಪ್ರಗತಿಯಲ್ಲಿರುವ ಇಂದಿರಾ ಕ್ಯಾಂಟೀನ ಕಾಮಗಾರಿಗೆ ವೇಗ ನೀಡಿ ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ತಾಳಿಕೋಟಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪಟ್ಟಣದ ಹುಣಸಗಿ ರಸ್ತೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ ಕಟ್ಟಡದ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಈ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಕಟ್ಟಡವು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಕ್ಯಾಂಟೀನ ಸುತ್ತ ಕಂಪೌಂಡ್ ನಿರ್ಮಿಸಿ, ಪ್ಲೋರಿಂಗ್ ಮಾಡಲು ತಾಳಿಕೋಟಿಯ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಹಳೆಯ ಪುರಸಭೆಯ ಆವರಣದಲ್ಲಿನ ಗ್ರಂಥಾಲಯ ಕಟ್ಟಡವನ್ನು ಪರಿಶೀಲನೆ ನಡೆಸಿದ ಅವರು, ಈಗಿರುವ ಗ್ರಂಥಾಲಯದ ಪಕ್ಕದಲ್ಲಿರುವ ಖಾಲಿ ಜಾಗೆಯಲ್ಲಿ ಆಧುನಿಕ ಸೌಲಭ್ಯಯುಳ್ಳ ಅತ್ಯುತ್ತಮ ಸ್ಮಾರ್ಟ ಗ್ರಂಥಾಲಯ ನಿರ್ಮಾಣಕ್ಕಾಗಿ ನೀಲ ನಕ್ಷೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಕೌಶಲ್ಯಾಭಿವೃದ್ಧಿಕಾರಿ ಸಿ.ಬಿ ಕುಂಬಾರ, ತಾಳಿಕೋಟಿ ತಹಶೀಲ್ದಾರ ಪ್ರೇಮಸಿಂಗ್ ಪವಾರ, ಮುಖ್ಯಾಧಿಕಾರಿ ಮೋಹನ ಜಾಧವ, ಆರೋಗ್ಯ ನಿರೀಕ್ಷಕರಾದ ಶಿವಾನಂದ ಜುಮನಾಳ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.