Voice Of Janata :Sports NEWS : IPL 2024 :
RR VS DC
IPL 2024 : ದೆಹಲಿ ತಂಡವನ್ನು ಮಣಿಸಿದ ರಾಜಸ್ಥಾನ ರಾಯಲ್ಸ್
Editor : ಜೈಪುರದಲ್ಲಿ ನಡೆದ ಐಪಿಎಲ್ 2024 ರ 9 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ದೆಹಲಿ ತಂಡವನ್ನು 12 ರನ್ ಗಳಿಂದ ಮಣಿಸಿದೆ. ಟಾಸ್ ಗೆದ್ದ ದೆಹಲಿ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು ರಾಜಸ್ಥಾನ್ ರಾಯಲ್ಸ್ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಗಳಿಗೆ ಕಟ್ಟಿ ಹಾಕಿತು.
ಇಲ್ಲಿನ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ರಾಜಸ್ತಾನ್ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 12 ರನ್ ಗಳ ರೋಚಕ ಗೆಲುವು ಸಾಧಿಸಿದೆ.
ಚೇಸಿಂಗ್ ನಲ್ಲಿ ಎಡವಿಡ ದೆಹಲಿ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕೇವಲ 173 ರನ್ ಗಳನ್ನಷ್ಟೇ ಗಳಿಸುವುದಕ್ಕೆ ಸಾಧ್ಯವಾಯಿತು. ವಾರ್ನರ್ ಮತ್ತು ಮಾರ್ಷ್ ಅವರ ಉತ್ತಮ ಆರಂಭಿಕ ಆಟದ ಹೊರತಾಗಿಯೂ ದೆಹಲಿ ತಂಡ ಚೇಸಿಂಗ್ ನಲ್ಲಿ ಎಡವಿತ್ತು.