IPL 2024: PBKS, LSG
ಗೆಲುವಿನ ವೇಗವನ್ನು ಹುಡುಕುವ ಮುಖಾಮುಖಿ
Voiceofjanata.in : Sports News : IPL 2024:
Editor : KL ರಾಹುಲ್ ನೇತೃತ್ವದ LSG ತಮ್ಮ ಆರಂಭಿಕ ಪಂದ್ಯವನ್ನು ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತರು ಮತ್ತು ನಿಖರವಾಗಿ ಒಂದು ವಾರದ ಅಂತರದ ನಂತರ ಮತ್ತೆ ಕ್ರಿಯೆಗೆ ಮರಳಿದರು, ಲಕ್ನೋ ಫ್ರಾಂಚೈಸ್ ತವರಿನಲ್ಲಿ ಗೆಲುವಿನ ಆರಂಭವನ್ನು ನಿರೀಕ್ಷಿಸುತ್ತದೆ.
ಶನಿವಾರ, ಮಾರ್ಚ್ 30ರಂದು ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 11ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡುತ್ತಿವೆ. ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪ್ರಸಕ್ತ ಆವೃತ್ತಿಯಲ್ಲಿ ಆಡಿದ ಒಂದು ಪಂದ್ಯದಲ್ಲಿ ಸೋಲು ಅನುಭವಿಸಿದ್ದು, ತವರಿನ ಅಂಗಳದಲ್ಲಿ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ.
ಇನ್ನು ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಆಡಿದ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಒಂದು ಸೋಲಿನೊಂದಿಗೆ ಅಭಿಯಾನ ಆರಂಭಿಸಿದ್ದು, ಅಂಕಪಟ್ಟಿಯಲ್ಲಿ ಮೇಲೇಳಲು ಗೆಲುವು ಹುಡುಕುತ್ತಿದೆ.
ಲಕ್ನೋ ಸೂಪರ್ ಜೈಂಟ್ಸ್ vs ಪಂಜಾಬ್ ಕಿಂಗ್ಸ್ ಸಂಭಾವ್ಯ ಆಡುವ 11ರ ಬಳಗ
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಪ್ರಭ್‌ಸಿಮ್ರಾನ್ ಸಿಂಗ್, ಸ್ಯಾಮ್ ಕರ್ರಾನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಹಾರ್.
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ/ ವಿಕೆಟ್ ಕೀಪರ್), ಕ್ವಿಂಟನ್ ಡಿ ಕಾಕ್, ದೇವದತ್ ಪಡಿಕ್ಕಲ್, ಆಯುಷ್ ಬಡೋನಿ, ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ಯಶ್ ಠಾಕೂರ್.
ಲಕ್ನೋ vs ಪಂಜಾಬ್ ಪಂದ್ಯದ ವಿವರ
ಸ್ಥಳ ಮತ್ತು ದಿನಾಂಕ: ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಶನಿವಾರ, ಮಾರ್ಚ್ 30ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆಯಲಿದೆ.
ಪಂದ್ಯದ ಸಮಯ:
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ಮಾಹಿತಿ
ಐಪಿಎಲ್ 2024ರ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇನ್ನು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರಲಿದೆ.