Voice of Janata: Sports News: IPL 2024
SRH VS GT
DESK : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಎಸ್‌ಆರ್‌ಎಚ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League 2024 17ನೇ ಆವೃತ್ತಿಯಲ್ಲಿ ಮಾರ್ಚ್ 31ರ ಭಾನುವಾರ ಅಭಿಮಾನಿಗಳಿಗೆ ಡಬಲ್ ಧಮಾಕಾ. ವಾರಾಂತ್ಯವಾದ ಇಂದು ಎರಡೆರಡು ಪಂದ್ಯಗಳು ನಡೆಯುತ್ತಿವೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಿನದ ಮೊದಲ ಪಂದ್ಯದಲ್ಲಿ ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು, ಪ್ಯಾಟ್ ಕಮಿನ್ಸ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಎರಡನೇ ಪಂದ್ಯವು ವಿಶಾಖಪಟ್ಟಣದಲ್ಲಿ ನಡೆಯುತ್ತಿದ್ದು, ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಋತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಾದಾಡುತ್ತಿವೆ.
ಜಿಟಿ vs ಎಸ್‌ಆರ್‌ಎಚ್ ಪಂದ್ಯದ ವಿವರ
ಸ್ಥಳ ಮತ್ತು ದಿನಾಂಕ: ಗುಜರಾತ್ ಟೈಟನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಐಪಿಎಲ್ 2024ರ ಪಂದ್ಯವು ಭಾನುವಾರ, ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಪಂದ್ಯದ ಸಮಯ: ಗುಜರಾತ್ ಟೈಟನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ರೋಚಕ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.
SRH VS GT ಸಂಭಾವ್ಯ ಆಡುವ 11ರ ಬಳಗ
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ವಿಜಯ್ ಶಂಕರ್, ಅಜ್ಮತುಲ್ಲಾ ಒಮರ್ಜಾಯ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಉಮೇಶ್ ಯಾದವ್, ಮೋಹಿತ್ ಶರ್ಮಾ, ಸ್ಪೆನ್ಸರ್ ಜಾನ್ಸನ್, ಸಾಯಿ ಸುದರ್ಶನ್.
ಸನ್‌ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಜಯದೇವ್ ಉನಾದ್ಕಟ್, ಉಮ್ರಾನ್ ಮಲಿಕ್.
ಜಿಟಿ vs ಎಸ್‌ಆರ್‌ಎಚ್: ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ಮಾಹಿತಿ
ಐಪಿಎಲ್ 2024ರ ಗುಜರಾತ್ ಟೈಟನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯವು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇನ್ನು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರಲಿದೆ.