ಚುಟುಕು ಕ್ರಿಕೆಟ್ ಶುರು: ಐಪಿಎಲ್ ಅಭಿಮಾನಿಗಳಿಗೆ ಸಂತಸ
IPL 2025 ಇಂದು ಆರ್‌ಸಿಬಿ-ಕೆಕೆಆರ್ ಮುಖಾಮುಖಿ
Voiceofjanata DeSK NEWS : ಬೆಂಗಳೂರು: ಆರ್‌ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮಖಿಯಾಗುವ ಮೂಲಕ ಒಂದು ವಾರ ಸ್ಥಗಿತಗೊಂಡಿದ್ದ ಐಪಿಎಲ್ 18ನೇ ಆವೃತ್ತಿ ಶನಿವಾರ ಪುನಾರಂಭವಾಗಲಿದೆ. ಬ್ಯಾಟಿಂಗ್ ತಾರೆ ವಿರಾಟ್ ಕೊಹ್ಲಿ ಪಂದ್ಯದ ಮುಖ್ಯ ಭೂಮಿಕೆಯಾಗಿದ್ದಾರೆ.
ರಜತ್ ಪಾಟೀದಾರ್ ಸಾರಥ್ಯದ ಆರ್‌ಸಿಬಿ, +0.482 ನೆಟ್ ರನ್‌ರೇಟ್ ಹೊಂದಿದ್ದು, ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಇಷ್ಟೇ ಅಂಕಗಳನ್ನು ಹೊಂದಿರುವ ಗುಜರಾತ್ ಟೈಟನ್ಸ್ +0.793 ಉತ್ತಮ ರನ್ ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಆರ್‌ಸಿಬಿಯು ಶನಿವಾರದ ಪಂದ್ಯವನ್ನು ಗೆದ್ದರೆ 18 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡ ಎನಿಸಲಿದೆ.
ಅತ್ತ 12 ಪಂದ್ಯಗಳನ್ನಾಡಿರುವ ಅಜಿಂಕ್ಯ ರಹಾನೆ ನೇತೃತ್ವದ ಕೋಲೊತಾ ನೈಟ್ ರೈಡರ್ಸ್, 11 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಪ್ಲೇಆಫ್ ಸ್ಪರ್ಧೆಯನ್ನು ಜೀವಂತವಾಗಿಟ್ಟುಕೊಳ್ಳಬೇಕಾದರೆ 3 ಬಾರಿಯ ಚಾಂಪಿಯನ್ ಕೆಕೆಆರ್ ಗೆಲ್ಲುವುದು ಅನಿವಾರ್ಯ, ಒಂದು ವೇಳೆ ಸೋತರೆ ಪ್ಲೇಆಫ್ ಸ್ಪರ್ಧೆಯಿಂದ ನಿರ್ಗಮಿಸಿದ ನಾಲ್ಕನೇ ತಂಡವಾಗಲಿದೆ. ಹೀಗಾಗಿ ರಹಾನೆ ಬಳಗಕ್ಕೆ ಶನಿವಾರ ಪಂದ್ಯ ಮಾಡು ಇಲ್ಲವೇ ಮಡಿ ಎನಿಸಿದೆ.
ಸ್ಥಳ: ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬೆಂಗಳೂರು
ಪಂದ್ಯ ಆರಂಭ: ರಾತ್ರಿ 7.30
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್