IPL 2025: VOICEOFJANATA SPORTS NEWS
ಮುಂಬೈ ವಿರುದ್ಧ ಟಾಸ್ ಗೆದ್ದ ಸಿ ಎಸ್ ಕೆ ಕ್ಷೇತ್ರ ರಕ್ಷಣೆ ಆಯ್ಕೆ..!
ಐಪಿಎಲ್-2025 : ಐಪಿಎಲ್ ಟೂರ್ನಿಯಲ್ಲಿ ತಲಾ ಐದು ಸಲ ಪ್ರಶಸ್ತಿ ಜಯಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ.
ಮುಂಬೈ ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಮಾಡುತ್ತಿದೆ.
ಐಪಿಎಲ್ನ ಎರಡು ಅತ್ಯಂತ ಯಶಸ್ವಿ ಮತ್ತು ದೊಡ್ಡ ಪ್ರತಿಸ್ಪರ್ಧಿ ತಂಡಗಳು ಇಂದು ಮುಖಾಮುಖಿಯಾಗುತ್ತಿವೆ. ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಈ ಋತುವಿನಲ್ಲಿ ಮೊದಲ ಬಾರಿಗೆ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ.
ಸಂಭಾವ್ಯ ಆಡುವ ಬಳಗ
ಮುಂಬೈ ಇಂಡಿಯನ್ಸ್
ರೋಹಿತ್ ಶರ್ಮಾ, ವಿಲ್ ಜ್ಯಾಕ್ಸ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ರಾಬಿನ್ ಮಿಂಜ್ (ವಿಕೆಟ್ ಕೀಪರ್), ದೀಪಕ್ ಚಾಹರ್, ಕರಣ್ ಶರ್ಮಾ, ಮುಜೀಬ್ ಉರ್ ರೆಹಮಾನ್, ಟ್ರೆಂಟ್ ಬೌಲ್ಟ್.
ಇಂಪ್ಯಾಕ್ಟ್ ಪ್ಲೇಯರ್: ರಾಜ್ ಬಾವ, ಸತ್ಯನಾರಾಯಣ ರಾಜು, ಅಶ್ವನಿ ಕುಮಾರ್.
ಸಿಎಸ್‌ಕೆ
ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಶಿವಂ ದುಬೆ, ಡೆವೋನ್ ಕಾನ್ವೆ, ದೀಪಕ್ ಹೂಡಾ, ರವೀಂದ್ರ ಜಡೇಜಾ, ಎಂಎಸ್ ಧೋನಿ, ಮತೀಶ ಪತಿರಾನ, ನೂರ್ ಅಹ್ಮದ್, ಖಲೀಲ್ ಅಹ್ಮದ್, ಮುಖೇಶ್ ಚೌಧರಿ.
ಇಂಪ್ಯಾಕ್ಟ್ ಪ್ಲೇಯರ್: ಶ್ರೇಯಸ್ ಗೋಪಾಲ್, ಕಮಲೇಶ್ ನಾಗರಕೋಟಿ, ರವಿಚಂದ್ರನ್ ಅಶ್ವಿನ್, ವಿಜಯ್ ಶಂಕರ್, ರಾಹುಲ್ ತ್ರಿಪಾಠಿ.
ಪಂದ್ಯ ಆರಂಭ: ರಾತ್ರಿ 7.30ಕ್ಕೆ
ಸ್ಥಳ: ಎಂ.ಎ. ಚಿದಂಬರಂ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್