Voice Of JANATA DESK Sports NEWS
IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR
IPL 2026 MI Vs KKR :ವಾಂಖೆಡೆ ಕ್ರೀಡಾಂಗಣದಲ್ಲಿ ಮಾರ್ಚ್ 29 ಭಾನುವಾರದಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿತು. ಇದಕ್ಕುತ್ತರವಾಗಿ ಮುಂಬೈ ಇಂಡಿಯನ್ಸ್ ತಂಡ ಇನ್ನೂ 5 ಎಸೆತಗಳು ಬಾಕಿ ಉಳಿದಿರುವಾಗಲೇ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ ಎರಡನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಬೃಹತ್ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ವಾಂಖೆಡೆ ಮೈದಾನದಲ್ಲಿನ 14 ವರ್ಷಗಳ ವನವಾಸಕ್ಕೆ ಹಾರ್ದಿಕ್ ಪಾಂಡ್ಯ ಪಡೆ ಕೊನೆಯಾಡಿದೆ. ಈ ಪಂದ್ಯದಲ್ಲಿ ಕೋಲ್ಕತ್ತಾ ತಂಡ ನೀಡಿದ್ದ 19.1 ಓವರ್‌ಗಳಲ್ಲಿ 221 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 6 ವಿಕೆಟ್‌ಗಳಿಂದ ಗೆದ್ದುಕೊಂಡಿತು.


















