ಲಿಂಗಸೂಗೂರು: ಐಪಿಎಲ್ ಬೆಟ್ಟಿಂಗ್ ಆಡುತ್ತಿದ್ದಾಗ ಪ್ರತ್ಯೇಕ ಎರಡು ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿ, ನಗದು ಜಪ್ತಿಗೈದಿರುವ ಘಟನೆ ಬಿಸಿಲೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಮುದಗಲ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಬೆಟ್ಟಿಂಗ್ ಆಡುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿಗೈದು ಶರಣಬಸವ ಯಮನೂರಪ್ಪ ಸಿವನಗುತ್ತಿ ಬಂಧಿತ ಆರೋಪಿ. ಇನ್ನು ಆರೋಪಿಯಿಂದ 3100 ನಗದು ಹಾಗೂ ಬೆಟ್ಟಿಂಗ್ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಮುದಗಲ್ನ ಬಾಷಾ ಅಬ್ದುಲ್ ಘನಿಯನ್ನು ಬಂಧಿಸಿ 2500 ನಗದು ಜಪ್ತಿಗೈದಿದ್ದಾರೆ. ಅಲ್ಲದೇ, ಇಬ್ಬರನ್ನು ವಶಕ್ಕೆ ತೆಗೆದುಕೊಂಡು ಕಾನೂನು ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.