RCB vs LSG: LIVE 7:30 – PM Today
Voice Of Janata :Sports NEWS : IPL 2024
IPL 2024 : ಇಂದು ಲಕ್ನೋ ವಿರುದ್ಧ ಆರ್ ಸಿ ಬಿ ಚಾಲೆಂಜ್ ಮಾಡುತ್ತಾ..?
DesK NEWS : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 2ರ ಮಂಗಳವಾರ ನಡೆಯುವ ಐಪಿಎಲ್ 2024ರ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಎಲ್ಎಸ್‌ಜಿ ತಂಡಗಳು ಮುಖಾಮುಖಿಯಾಗುತ್ತಿವೆ.
ಇಂಡಿಯನ್ ಪ್ರೀಮಿಯರ್ ಲೀಗ್ 2024ರ 15ನೇ ಪಂದ್ಯದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ (RCB vs LSG) ತಂಡಗಳು ಎದುರಾಗುತ್ತಿವೆ. ತವರಿನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಸೋತ ಆರ್‌ಸಿಬಿ, ಮತ್ತೆ ಅದೇ ಚಿನ್ನಸ್ವಾಮಿ ಮೈದಾನದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಸಾರಥ್ಯದ ಎಲ್‌ಎಸ್‌ಜಿ ತಂಡವನ್ನು ಎದುರಿಸುತ್ತಿದೆ. ಈಗಾಗಲೇ ಎರಡು ಪಂದ್ಯಗಳಲ್ಲಿ ಆಡಿರುವ ಲಕ್ನೋ, ತವರಿನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಗೆದ್ದು ಎರಡು ಅಂಕ ಸಂಪಾದಿಸಿದೆ. ಅತ್ತ ಬೆಂಗಳೂರು ತಂಡವು ಆಡಿರುವ ಮೂರು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿದೆ.
ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ಆಡುವ ಬಳಗ
ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ಮಯಾಂಕ್ ಯಾದವ್.
ಆರ್‌ಸಿಬಿ ಸಂಭಾವ್ಯ ಆಡುವ ಬಳಗ
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಕ್ಯಾಮರೂನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟೀದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಮಯಾಂಕ್ ಡಾಗರ್, ಲಾಕಿ ಫರ್ಗ್ಯುಸನ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್.
ಪಂದ್ಯ : ಚಿನ್ನಸ್ವಾಮಿ ಮೈದಾನದಲ್ಲಿ ಬೆಂಗಳೂರು.
ಸಮಯ : 7:30 ರಾತ್ರಿ
ದಿನಾಂಕ : ಎಪ್ರಿಲ್ 2
ಆರ್ ಸಿ ಬಿ ವಿರುದ್ಧ ಎಲ್ ಎಸ್ ಸಿ ಬಿಗ್ ಪೈಟ್