ರಾಯಚೂರು: ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಕಚೇರಿಯ ಕೆಲಸಕ್ಕೆ ಬಾರದ ಕಡತಗಳಿಡುವ ಸ್ಥಳದಲ್ಲಿ ರಾಷ್ಟ್ರ ಧ್ವಜವನ್ನು ಮೂಲೆಗೆ ಹಾಕಿ ಅವಮಾನಿಸಿರುವ ಘಟನೆ ಬೆಳಕಿಗೆ ಬಂದಿದೆ.
ತಾಲೂಕಿನ ಗಾಣಧಾಳ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಘಟನೆ ಇದಾಗಿದೆ. ಇಲ್ಲಿನ ಸಿಬ್ಬಂದಿಗಳ ನಿರ್ಲಕ್ಷ, ಅಧಿಕಾರಿಗಳ ಬೇಜವಾಬ್ದಾರಿ ಇಲ್ಲಿ ಎದ್ದು ಕಾಣುತ್ತಿದೆ. ಪ್ರತಿನಿತ್ಯ ಧ್ವಜಾರೋಹಣ ಮಾಡಬೇಕಾದ ರಾಷ್ಟ್ರ ಧ್ವಜವನ್ನು ಕಚೇರಿಯ ಹಳೆಯ ಕಡತಗಳನ್ನು ಇಡುವ ಮೂಲೆಯಲ್ಲಿ ಎಸೆದಿದ್ದು, ರಾಷ್ಟ್ರಧ್ವಜಕ್ಕೆ ಸುಣ್ಣ ಬಣ್ಣ ಸಿಡಿದಿದೆ.
ಅದೆಷ್ಟು ದಿನಗಳಿಂದ ಇಲ್ಲಿ ರಾಷ್ಟ್ರ ಎಸೆಯಲಾಗಿದೆಯೋ ತಿಳಿಯದಾಗಿದೆ. ಇಲ್ಲಿನ ಸಿಬ್ಬಂದಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದು ಸಾರ್ವಜನಿಕರ ಅಸಮಧಾನಕ್ಕೆ ಕಾರಣವಾಗಿದೆ.
ತ್ರಿವರ್ಣ ಧ್ವಜಕ್ಕೆ ತನ್ನದೇ ಆದ ಗೌರವವಿದೆ. ಅಂತಹ
ಗೌರವವನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಳು ಮಾಡಿದ್ದಾರೆ. ರಾಷ್ಟ್ರಧ್ವಜ ನಿರ್ವಹಣೆ ಮಾಡುವಲ್ಲಿ ಸಿಬ್ಬಂದಿಗಳು ಸಂಪೂರ್ಣ ವಿಫಲವಾಗಿದ್ದು, ಸಂಬಂಧಿಸಿದ ಪಿಡಿಓ, ಆರ್ ಐ , ವಿಎ ಏನು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಪಂಚಾಯತಿ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಸಂಬಂಧಿಪಟ್ಟ ಅಧಿಕಾರಿಗಳು
ಕ್ರಮಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.