ಬಾವಿಯ ಈ ನೀರು ಕುಡಿಯಲು ಯೋಗ್ಯವೇ..? ಅಸ್ತೂರು ಗ್ರಾಮಸ್ಥರಿಂದ ಮೌನ ಪ್ರತಿಭಟನೆ..!
ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮಕ್ಕೆ ಜಲ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಿರುವ ನಲ್ಲಿ ಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಬದಲು ಕೊಳಚೆ ನೀರು ಪೂರೈಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಮಂಗಳವಾರ ಮೌನ ಪ್ರತಿಭಟನೆ ನಡೆಸಿದ್ದಾರೆ.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನಪ್ರಿಯ ಯೋಜನೆಯಲ್ಲಿ ಪ್ರತಿಯೊಬ್ಬರಿಗೂ ಶುದ್ಧಕುಡಿಯುವ ನೀರು ದೊರಕಿಸಿ ಕೊಡಬೇಕೆಂಬ ನಿಟ್ಟಿನಲ್ಲಿ ಜಾರಿಗೆ ತಂದಿರುವ ಜಲಜೀವನ್ ಮಿಷನ್ ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಬದಲು ಕೊಳಚೆ ನೀರು ಪೂರೈಕೆ ಮಾಡುತ್ತಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹನೂರು ತಾಲೂಕಿನ ಕಾಡಂಚಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದಲ್ಲಿ 99 ಲಕ್ಷ ವೆಚ್ಚದಲ್ಲಿ ಪ್ರತಿಯೊಂದು ಮನೆಗೂ ನಲ್ಲಿ ಸಂಪರ್ಕ ನೀಡಿ ಶುದ್ಧ ಕುಡಿಯುವ ನೀರಿನ ಪೂರೈಕೆ ಮಾಡಬೇಕಿತ್ತು, ಆದರೆ ಬೋರ್ವೆಲ್ ಕೊರೆಸದೆ ಪುರಾತನ ತೆರೆದ ಬಾವಿಯಲ್ಲಿ ಸಂಗ್ರಹವಾಗಿರುವ ಕೊಳಚೆ ನೀರನ್ನು ಪೂರೈಕೆ ಮಾಡುತ್ತಿದ್ದಾರೆ. ಈ ಸಂಬಂಧ ಗ್ರಾಮಸ್ಥರು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ದೂರಿನ ಯಾವುದೇ ಪ್ರಯೋಜನವಾಗಿರಲಿಲ್ಲ ಇದರಿಂದ ಬೇಸೆತ್ತ ಗ್ರಾಮಸ್ಥರು ಇಂದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ವೇಳೆ ಗ್ರಾಮದ ಮುಖಂಡ ರವಿಕುಮಾರ್ ಮಾತನಾಡಿ ಪ್ರಧಾನ ಮಂತ್ರಿಗಳು ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಿ ಆರೋಗ್ಯ ಕಾಪಾಡಿಕೊಳ್ಳಲಿ ಎಂಬ ಈ ಮಹತ್ವಾಕಾಂಕ್ಷೆಯ ಯೋಜನೆ ತಂದಿದ್ದಾರೆ. ಆದರೆ ಗುತ್ತಿಗೆದಾರ ಹಾಗೂ ಅಧಿಕಾರಿಗಳ ನಿರ್ಲಕ್ಷದಿಂದ ಕೊಳಚೆ ನೀರು ಪೂರೈಕೆ ಮಾಡಿ ಅನಾರೋಗ್ಯಕ್ಕೆ ದಾರಿ ಮಾಡಿ ಕೊಡುತ್ತಿದ್ದಾರೆ. ಪೊನ್ನಾಚಿ ಹಾಗೂ ಮರೂರು ಗ್ರಾಮಗಳಲ್ಲಿ ಬೋರ್ವೆಲ್ ಕೊರೆಸಿ ಟ್ಯಾಂಕ್ ನಿರ್ಮಾಣ ಮಾಡಿ ಇದರಿಂದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದಾರೆ .ಆದರೆ ಅಸ್ತೂರು ಗ್ರಾಮದಲ್ಲಿ ಕೊಳಚೆ ನೀರು ಪೂರೈಕೆ ಮಾಡುತ್ತಿರುವುದು ಏಕೆ? ಎಂದು ಪ್ರಶ್ನಿಸಿದರು. ನಮ್ಮ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವವರೆಗೂ ಹಾಗೂ ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತೇವೆ ಈ ಹಿಂದೆಯು ನಾನು ಹಲವಾರು ಅಧಿಕಾರಿಗಳಿಗೆ ದೂರು ನೀಡಿದರು ಯಾವುದೇ ಪ್ರಯೋಜನವಿಲ್ಲ ಅಧಿಕಾರಿಗಳು ಹಾಗೂ ಸ್ಥಳಿಯ ಜನಪ್ರತಿನೀದಿಗಳು ಮೌನವಹಿಸಿರುವುದು ನಮಗೆ ನಾಚಿಕೆಗೆಡಿನ ಸಂಗಾತಿ ಎಂದು ಎಚ್ಚರಿಸಿದ್ದಾರೆ .
ಊರು ಗೌಡರಾದ ರಂಗಮಾದಪ್ಪ ಮಾತನಾಡಿ ಪುರಾತನ ಬಾವಿಗೆ ಪೈಪು ಜೋಡಿಸಿ ಅದರ ಪಾವಿತ್ರ್ಯತೆಯನ್ನು ಹಾಳುಮಾಡಿರುವುದು ನಾಚಿಕೆಗೇಡಿನ ಕೆಲಸವಾಗಿದೆ. ಬಾವಿಗೆ ನಾವು ಇಳಿಯಬೇಕಾದರೆ ಕಾಲಿನಲ್ಲಿ ಚಪ್ಪಲಿಯು ಸಹ ಇರುವುದಿಲ್ಲ ಇಂತಹ ಕೆಲಸ ಮಾಡಿರುವ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಸ್ಥಳಿಯ ಗ್ರಾಮದೇವತೆ ದುರ್ಬುದ್ದಿ ನೀಡದಿರಲಿ ಎಂಬುದೆ ನಮ್ಮ ಆಶಯವಾಗಿದೆ ಎಂದು ತಿಳಿಸಿದರು. ಪ್ರತಿಭಟನೆ ವೇಳೆ ಕುಡಿಯಲು ಕೊಳಚೆ ನೀರು ಬೇಡ, ಮನೆ ಮನೆಗೆ ಕುಡಿಯಲು ಶುದ್ಧ ಕುಡಿಯುವ ನೀರು ಕೊಡಿ ಎಂದು ವಿನೂತನ ಪ್ರತಿಭಟನೆ ನಡೆಸುವುದರ ಮೂಲಕ
ಪೊನ್ನಾಚಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನೀಲಾಂಬಿಕೆ ಮತ್ತು ಪಿಡಿಒ ರವರಿಗೆ ಕಾಮಗಾರಿಯನ್ನು ನಿಲ್ಲಿಸುವಂತೆ ಲಿಖಿತ ರೂಪದಲ್ಲಿ ದೂರನ್ನು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾದ ನೀಲಾಂಬಿಕೆ,ಉಪಾಧ್ಯಕ್ಷರಾದ ಭದ್ರೆಗೌಡ , ಗ್ರಾಮ ಪಂಚಾಯತಿ ಸದಸ್ಯೆ ಜಯಮ್ಮ. ಊರ ಗೌಡರುಗಳಾದ ರಂಗಮಾದಪ್ಪ, ಚಿಕ್ಕರಂಗೇಗೌಡ , ಮುನಿಬಸೆವೇಗೌಡ, ಉದ್ಯಮಿ ನಾಗೇಶ್ ಜಿ .ಕೋಟೆಬಸಪ್ಪ ,ಕೆಂಪರಾಜು, ಶಿವಣ್ಣ , ತಂಬಡಿ ಮಾದಯ್ಯ,ಅಸ್ತೂರು ಕಾಳಮ್ಮ ,ಪ್ರಭು , ಪುಟ್ಟಮಾದಪ್ಪ ಗ್ರಾಮದ ಮುಖಂಡರುಗಳು ಹಾಜರಿದ್ದರು.
ವರದಿ :ಚೇತನ ಕುಮಾರ್ ಎಲ್ , ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ.