ಬೆಂಗಳೂರು: ಭ್ರಷ್ಟಾಚಾರದ ಆರೋಪದಡಿ ಪ್ರಕರಣ ದಾಖಲಿಸಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪರನ್ನು ಬಂಧಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈಶ್ವರಪ್ಪ ಅವರನ್ನು ಬಂಧಿಸುವ ವರೆಗೆ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
ಈಶ್ವರಪ್ಪರನ್ನು ಬಂಧಿಸುವವರೆಗೂ ಕಾಂಗ್ರೆಸ್ ದಿನದ 24 ಗಂಟೆಗಳ ಕಾಲ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿತ್ತು. ನಿನ್ನೆ ದಿನ ವಿಧಾನಸಭೆಯ ಬ್ಯಾಂಕ್ವೆಟ್ ಹಾಲ್ನಲ್ಲಿ ಅಹೋ ರಾತ್ರಿ ಧರಣಿ ಕುಳಿತ್ತಿದ್ದ ಕಾಂಗ್ರೆಸ್ ನಾಯಕರು ಇದೀಗ ಮಧ್ಯಾಹ್ನ 1 ಗಂಟೆಯ ವರೆಗೆ ಧರಣಿ ಮಾಡಲಾಗುವದು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಮಂದಿಟ್ಟುಕೊಂಡು ಕಾಂಗ್ರೆಸ್ ರಣ ತಂತ್ರ ಹೆಣೆಯುತ್ತಿದೆ ಎನ್ನಲಾಗುತ್ತಿದೆ. ಇದನ್ನೆ ರಾಜಕೀಯ ಅಸ್ತ್ರವಾನ್ನಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಯೋಜನೆ ರೂಪಿಸುತ್ತಿದೆ ಎಂದು
ಹೇಳಲಾಗುತ್ತಿದೆ.