ಯುವಕರು ಮೋಜು ಮಸ್ತಿಗಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ..!
ಇಂಡಿ : ರಾಷ್ಟ್ರದ ಭವಿಷ್ಯ ರೂಪಿಸಬೇಕಾಗಿರುವ ಯುವ ಸಮೂಹ ವ್ಯಸನಿಗಳ ಸಹವಾಸ ಹಾಗೂ ಮೋಜು ಮಸ್ತಿಗಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಎಂದು ಶ್ರೀ.ಮ.ನಿ ಪ್ರ ಅಭಿನವ ಶಿವಲಿಂಗ ಮಹಾಸ್ವಾಮಿಗಳು ಹೇಳಿದರು
ತಾಲ್ಲೂಕಿನ ಹಿರೇಬೇವನೂರ ಗ್ರಾಮದಲ್ಲಿ ಮಲ್ಲಿಕಾರ್ಜುನ ದೇವರ ಛಟ್ಟಿ ಜಾತ್ರಾ ಮಹೋತ್ಸವ ಮತ್ತು ಭ್ರಮರಾಂಬಿಕಾ ದೇವಿಯ ಮೂರ್ತಿಪ್ರಾಣ ಹಾಗೂ ಕಳಸಾರೋಹಣ ನಿಮತ್ಯ ಆಯೋಜಿಸಿರುವ 9ನೇ ಪ್ರವಚನ ಕಾರ್ಯಕ್ರಮದಲ್ಲಿ ಹೇಳಿದ್ದರು.
ವ್ಯಸನಿಗಳಿಗೆ ಬಲಿಯಾದವರು ಶಾರೀರಿಕ, ಮಾನಸಿಕ ನಿಯಂತ್ರಣ ಕಳೆದುಕೊಂಡು ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ವಿದ್ಯಾರ್ಥಿಗಳು, ಯುವ ಪೀಳಿಗೆ ಮಾದಕ ಪದಾರ್ಥಗಳ ಗೀಳು ಅಂಟಿಸಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಮಾದಕ ವ್ಯಸನದ ಸುಳಿಗೆ ಸಿಲುಕಿದರೆ, ಸುಲಭದಲ್ಲಿ ಹೊರಬರಲು ಸಾಧ್ಯವಿಲ್ಲ. ವ್ಯಸನಿಗಳಿಂದ ಆತನ ಕುಟುಂಬ ಹಾಗೂ ಸಮಾಜ ಕೂಡ ಸಮಸ್ಯೆ ಎದುರಿಸಬೇಕಾಗಿದೆ.
ಕ್ಷಣಿಕ ಸುಖಕ್ಕೆ ಬದುಕನ್ನು ಬಲಿಕೊಡದೆ ದುಶ್ಚಟಗಳ ದುಷ್ಪರಿಣಾಮ ಅರಿತು ಎಚ್ಚರದಿಂದಿದ್ದು ದೇಶದ ಸತ್ಪ್ರಜೆಗಳಾಗಿ ಬದುಕು ನಡೆಸಬೇಕು.ಮಾದಕ ವಸ್ತುಗಳ ಮೋಡಿಗೆ ಯುವ ಜನರು ಬಲಿಯಾಗದಂತೆ ಎಚ್ಚರ ವಹಿಸಲು ಜಾಗೃತಿ ಕಾರ್‍ಯಕ್ರಮಗಳನ್ನು ರೂಪಿಸಬೇಕು. ದುಶ್ಚಟಗಳನ್ನು ತ್ಯಜಿಸುವಂತೆ ಜನಜಾಗೃತಿ ಮೂಡಿಸಲು ಮುಂದಾಗಬೇಕು. ವ್ಯಸನ ಮುಕ್ತ ಸಮಾಜಕ್ಕಾಗಿ ಎಲ್ಲರೂ ಸಂಘಟಿತರಾಗಿ ಕೈ ಜೋಡಿಸಲು ಕಂಕಣಬದ್ಧರಾಗಬೇಕು ಎಂದರು. ಮುಖ್ಯ ಅತಿಥಿಗಳಾಗಿ ಮಾತೋಶ್ರೀ ವಿದ್ಯಾ ತಾಯಿ ಸಿದ್ಧಾರೂಡ ಕಲಬುರಗಿ ವೇ “ದಯನಂದ ಹಿರೇಮಠ ಶರಣಮ್ಮ ತಾಯಿ ಹಿರೇಬೇವನೂರ 9ನೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.