ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ನಡೆದ ಹೋರಾಟವನ್ನು ಹತ್ತಿಕ್ಕಲು ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನ
ಮುದ್ದೇಬಿಹಾಳ: ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ನಡೆದ ಹೋರಾಟವನ್ನು ಹತ್ತಿಕ್ಕಲು ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನೀಯ ಕೂಡಲೇ ಹೋರಾಟಗಾರರನ್ನು ಬೇಷರತ್ತಾಗಿ ಬಿಡುಗಡೆಗೂಳಿಸಬೇಕೆಂದು ಹೋರಾಟಗಾರರ ಸಮಿತಿಯ ಎಸ್ ಎಂ ನೆರಬೆಂಚಿ ಹಾಗೂ ರೈತಪರ ಹೋರಾಟಗಾರರಾದ ಬಿ.ಬಿ ಪಾಟೀಲ್ ಹೇಳಿದರು ಅವರು ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಪಿಪಿಪಿ ಮಾದರಿಯ ಬದಲಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಹೋರಾಟ ಸಮಿತಿಯು ನಿರಂತರವಾಗಿ 100ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿತ್ತು. ಅಷ್ಟಾದರೂ ಜಿಲ್ಲೆಯ ಜನಪ್ರತಿನಿಧಿಗಳ ಸ್ಪಷ್ಟ ಪ್ರತಿಕ್ರಿಯೆ ಸಿಗದ ಕಾರಣ 2026ರ ಜನವರಿ 1ರಂದು ಹೋರಾಟದ ಮುಂದಿನ ಭಾಗವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಎದುರು ಧರಣಿ ನಡೆಸಲು ಪ್ರತಿಭಟನಾಕಾರರು ಮುಂದಾದರು. ಇದನ್ನು ತಡೆದು ಪೊಲೀಸರು ಹೋರಾಟಗಾರರನ್ನು ಬಂಧಿಸಲು ಯತ್ನಿಸಿದಾಗ ನಡೆದ ತಳ್ಳಾಟದಲ್ಲಿ ಶ್ರೀ ಸಂಗನ ಬಸವೇಶ್ವರ ಸ್ವಾಮೀಜಿ ಮತ್ತು ಮಫ್ತಿಯಲ್ಲಿದ್ದ ಪೊಲೀಸರ ನಡುವೆ ಘರ್ಷಣೆ ನಡೆದ ಘಟನೆ ವರದಿಯಾಗಿದೆ. ಈ ಘಟನೆ ದುರದೃಷ್ಟಕರವಾಗಿದೆ.
ಹಾವೇರಿಯಲ್ಲಿ ಅನುದಾನ ಲಭ್ಯತೆ ಆಧರಿಸಿ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಇದನ್ನು ನಾವು ಸ್ವಾಗತಿಸುತ್ತೇವೆ ಎಂದು ಎಸ್ ಎಂ ನೆರಬೆಂಚಿ ಹೇಳಿದರು.
ಜನರಿಗೆ ಲಭ್ಯವಾಗಬೇಕಾದ ಸಾರ್ವಜನಿಕ ಆರೋಗ್ಯ ಸೇವೆಗಾಗಿ ನಡೆಯುತ್ತಿರುವ ಜನಾಂದೋಲನವನ್ನು ಕುಗ್ಗಿಸಲು ಸರ್ಕಾರ ಅತ್ಯಂತ ಹೀನ ಕೆಲಸಕ್ಕೆ ಕೈ ಹಾಕಿದೆ. ಜನರನ್ನು ಭಯಭೀತರನ್ನಾಗಿಸಿ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ’ ಎಂದು ಬಿ.ಬಿ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
‘ಹೋರಾಟಗಾರರಾದ ಭಗವಾನ ರಡ್ಡಿ, ಸಂಗನಬಸವ ಸ್ವಾಮೀಜಿ, ಅನಿಲ ಹೊಸಮನಿ, ಬೋಗೇಶ ಸೋಲಾಪುರ, ಸಿದ್ರಾಮ ಹಳ್ಳೂರ ಮತ್ತು ಅರವಿಂದ ಕುಲಕರ್ಣಿ ಸೇರಿದಂತೆ ಬಂಧಿಸಿರುವ ಎಲ್ಲ ಹೋರಾಟಗಾರರನ್ನು ಬೇಷರತ್ತಾಗಿ ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದರು ಈ ವೇಳೆ ಮಾನವ ಬಂದುತ್ವವೇದಿಕೆಯ ಎಸ್ ಜಿ ಬಿರಾದಾರ ಉಪಸ್ಥಿತರಿದ್ದರು.


















