ಕಲಬುರಗಿ: ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳೆ) 3533 ಹುದ್ದೆ ಹಾಗೂ ಪೊಲೀಸ್ ಕಾನ್ಸ್ಟೇಬಲ್ (ಸೇವಾನಿರತ) 387 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ (ಇಟಿ ಆ್ಯಂಡ್ ಪಿ.ಎಸ್.ಟಿ.) ಸಹಿಷ್ಣುತೆ ಹಾಗೂ ದೇಹದಾಢ್ರ್ಯತೆ ಪರೀಕ್ಷೆಯನ್ನು ಇದೇ ಜನವರಿ 6 ರಂದು ಕಲಬುರಗಿ ತಾಜ್ ಸುಲ್ತಾನಪುರ ಕೆ.ಎಸ್.ಆರ್.ಪಿ. 6ನೇ ಪಡೆ ಪೊಲೀಸ್ ಪರೇಡ್ ಗ್ರೌಂಡ್‍ದಲ್ಲಿ ಏರ್ಪಡಿಸಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಬೆಂಗಳೂರಿನ ನೇಮಕಾತಿ ಮತ್ತು ತರಬೇತಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಅಭ್ಯರ್ಥಿಗಳಿಗೆ ಹಾಜರಾತಿ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳಲು ಈಗಾಗಲೇ ಸಂದೇಶವನ್ನು ರವಾನಿಸಿರುತ್ತಾರೆ. ಆದ್ದರಿಂದ ಅಭ್ಯರ್ಥಿಗಳು ತಮಗೆ ಹಾಜರಾತಿ ಪತ್ರದಲ್ಲಿ ನೀಡಿರುವ ಸೂಚನೆಗಳನ್ವಯ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ (ಇಟಿ ಆಂಡ್ ಪಿಎಸ್.ಟಿ.) ಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.