ಇಂಡಿ : ಸರಕಾರದ ಸಾಧನೆಗಳ ಒಳಗೊಂಡ ಒಂದು ಕೋಟಿ ಕರ ಪತ್ರ ಮನೆ ಮನೆಗೂ ಹಂಚುವ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಹೇಳಿದರು.
ಪಟ್ಟಣದ ಭಾಜಪ ಕಾರ್ಯಾಲಯದಲ್ಲಿ ಸುದ್ದಿಗೊಷ್ಢಿ ಉದ್ದೇಶಿಸಿ ಮಾತಾನಾಡದ ಅವರು, ಭಾರತೀಯ ಜನತಾ ಪಕ್ಷದವತಿಯಿಂದ, ಇಂದಿನಿಂದ ಜ.೨೯ ರ ವರೆಗೆ ರಾಜ್ಯದಲ್ಲಿ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿ ನಡೆಯುವ ವಿಜಯ ಸಂಕಲ್ಪ ಅಭಿಯಾನಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯದ ಅಧ್ಯಕ್ಷರು, ಜಿಲ್ಲಾ ಅಧ್ಯಕ್ಷರು, ಸಂಸದರು, ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮತ್ತು ತಾಲ್ಲೂಕು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.