ಭೀಮಾ ಭಾಗದಲ್ಲಿ ಜನ ಸ್ಪಂದನ ಕಾರ್ಯಕ್ರಮ ಯಶಸ್ವಿ..!
ಚಡಚಣ: ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಪರಿಶೀಲಿಸಿ ತುರ್ತು ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಎಂದು ನಾಗಠಾಣ್ ಮತಕ್ಷೇತ್ರದ ಶಾಸಕರ ವಿಠ್ಠಲ ಕಟಕದೊಂಡ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಗುರುಕೃಪಾ ಕಲ್ಯಾಣ ಮಂಟಪದಲ್ಲಿ ಚಡಚಣ ತಾಲೂಕಿನ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ಸಾರ್ವಜನಿಕರಿಂದ ಸ್ಪಂದಿಸುವ ಮೂಲಕ ಅಧಿಕಾರಿಗಳು ಹಾಗೂ ಇಲಾಖೆಯ ಮೇಲೆ ವಿಶ್ವಾಸ ಮೂಡಿಸುವ ಕಾರ್ಯವಾಗಬೇಕು ಮೊದಲ ಹಂತದ ಜನಸ್ಪಂದನ ಕಾರ್ಯಕ್ರಮ ಯಶಸ್ವಿಯಾಗಬೇಕು ಎಂದರು. ಜಿಲ್ಲಾಧಿಕಾರಿ ಟಿ ಭುಬಾಲನ್ ಜನಸ್ಪಂದನ ಸರಕಾರದ ಮಹತ್ವದ ಕಾರ್ಯ ಕ್ರಮವಾಗಿದ್ದು ಅರ್ಜಿಗಳು ತುರ್ತಾಗಿ ಇತ್ಯರ್ಥಗೊಳ್ಳಬೇಕು ಎಂದು ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಒಟ್ಟು170 ಅರ್ಜಿ ಸ್ವಿಕೃತಗೊಂಡವು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾಪೋಲಿಸ ವರಿಷ್ಠಾಧಿಕಾರಿ ಋಷಿಕೇಶ ಭಗವಾನ, ಜಿಲ್ಲಾ ಪಂಚಾಯಿತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಸಿ. ಬಿ. ದೇವರಮನಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಸಿ ಬಿ ಕುಂಬಾರ್, ಉಪ ವಿಭಾಗ ಅಧಿಕಾರಿ ಆಬಿದ್ ಗದ್ಯಾಳ, ತಾಲೂಕ್ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್ ಖಡಗೇಕರ, ತಹಶೀಲ್ದಾರ್ ಸಂಜಯ ಇಂಗಳೆ, ಪಂಡಿತ್ ಕೊಡಹೊನ್ನ, ಕಂದಾಯ ನಿರೀಕ್ಷ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.